ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳು, ಪಿಯು ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಅಂಗನವಾಡಿಯಿಂದ ಪಿಯುಸಿ ವರೆಗೆ ಇಂದು ಸಹ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿರಸಿ ಮತ್ತು ಸಿದ್ದಾಪುರ ತಾಲೂಕುಗಳಲ್ಲಿ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.

