ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್-ಮಂತರ್ ನಲ್ಲಿ ನಡೆಯುತ್ತಿರುವ ಸಿಜೆಪಿ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದಿದೆ. ಈ ನಡುವೆ ಕಾಂಗ್ರೆಸ್ ಮೊಂಬತ್ತಿ ಮೆರವಣಿಗೆಗೆ ಕರೆ ನೀಡಿದೆ.
ನೀಟ್ ಅಕ್ರಮ ಖಂಡಿಸಿ ಜುಲೈ 25ರಂದು ನಾಳೆ ದೇಶಾದ್ಯಂತ ಮೋಂಬತ್ತಿ ಮೆರವಣಿಗೆ ಮಾಡಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಎಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಸಂದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ದೇಶದ ಜಿಲ್ಲೆ ಜಿಲ್ಲೆಗಳಲ್ಲಿಯೂ ಕಾಂಗ್ರೆಸ್ ನಿಂದ ಹಾಗೂ ವಿದ್ಯಾರ್ಥಿಗಳಿಂದ ಮೊಂಬತ್ತಿ ಮೆರವಣಿಗೆ ನಡೆಯಲಿದೆ.

