HomeKarnatakaಹಾಸ್ಟೆಲ್ ನಲ್ಲಿ ಮಂಚಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪದವಿ ವಿದ್ಯಾರ್ಥಿನಿ ಶವ ಪತ್ತೆ

ಹಾಸ್ಟೆಲ್ ನಲ್ಲಿ ಮಂಚಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪದವಿ ವಿದ್ಯಾರ್ಥಿನಿ ಶವ ಪತ್ತೆ

ಗದಗ: ಹಾಸ್ಟೆಲ್‌ನಲ್ಲಿ ಮಂಚಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳ ಶವ ಪತ್ತೆಯಾಗಿರುವ ಘಟನೆ ಗದಗದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ನಡೆದಿದೆ.

25 ವರ್ಷದ ವೀಣಾ ಹಾನಾಪುರ ಮೃತ ಪದವಿ ವಿದ್ಯಾರ್ಥಿನಿ. ವೀಣಾ ಆರ್‌ಡಿಪಿಆರ್‌ ವಿಶ್ವವಿದ್ಯಾಲಯದಲ್ಲಿ ಮಾಸ್ಟರ್ ಆಫ್ ಪಬ್ಲಿಕ್ ಹೆಲ್ತ್ (MPH) ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಈಕೆ ಮೂಲತಃ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಮೂಲದವಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೀಣಾ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಕಾರಣ ನೇಣುಬಿಗಿದ ಸ್ಥಿತಿಯಲ್ಲಿ ವೀಣಾ ಶವ ಪತ್ತೆಯಾದಾಗ, ಕಾಲುಗಳು ನೆಲಕ್ಕೆ ತಾಗಿದ್ದವು, ಬಿಗಿದಿರುವ ಬಟ್ಟೆ ಕೂಡ ಮಗಳದ್ದಲ್ಲ. ಅಲ್ಲದೇ ಮುಖಕ್ಕೆ ಗಾಯಗಳಾಗಿವೆ. ಇದರಿಂದ ಪೋಷಕರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಮಗಳ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಲು ಆಗ್ರಹಿಸಿದ್ದಾರೆ.

ಗದಗ ಗ್ರಾಮೀಣ ಪೊಲೀಸರು, ವಿವಿ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular