HomeKarnatakaಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಇಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ...

ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಇಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು. 25ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

1. ಜಿಲ್ಲೆಯಲ್ಲಿ ಈ ಕೆಳಗಿನ ಎಲ್ಲಾ ಸಂಸ್ಥೆಗಳಿಗೆ ದಿನಾಂಕ 25.07.2026 ರಂದು ರಜೆಯನ್ನು ಘೋಷಿಸಲಾಗಿದೆ ಹಾಗೂ ಇದನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಪ್ರಕಾರ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲೆಯ ಎಲ್ಲಾ ಅಂಗನವಾಡಿಗಳು

ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗು ಖಾಸಗಿ ಶಾಲೆಗಳು(ಎಲ್ಲಾ ವಸತಿ ಶಾಲೆಗಳೂ ಸೇರಿದಂತೆ)

ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳು -12ನೇ ತರಗತಿಯವರಿಗೆ(ಎಲ್ಲಾ ವಸತಿ ಕಾಲೇಜುಗಳೂ ಸೇರಿದಂತೆ) ಜಿಲ್ಲೆಯ ಎಲ್ಲಾ ITI ಮತ್ತು Diploma ಕಾಲೇಜುಗಳು (ಎಲ್ಲಾ ವಸತಿ ಕಾಲೇಜುಗಳೂ ಸೇರಿದಂತೆ)

2. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.

3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

5. ಪ್ರವಾಸಿಗರು/ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

6. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ದ ಸ್ಥಿತಿಯಲ್ಲಿರಿಸಿಕೊಳ್ಳುವುದು.

+ ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.

ಟೋಲ್ ಫ್ರೀ ಸಂಖ್ಯೆ: 1077 0824-2442590

ಉಡುಪಿ ಜಿಲ್ಲೆ

ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಭಾರತೀಯ ಹವಾಮಾನ ಇಲಾಖೆಯು ಮುಂದಿನ ಕೆಲವು ದಿನ ತೀವ್ರ ಮಳೆಯ ಆರೆಂಜ್ ಅಲರ್ಟ್ ಘೋಷಿಸಿರುವುದರಿಂದ, ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜುಲೈ 25ರ ಶನಿವಾರದಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಡಿಪ್ಲೊಮಾ ಮತ್ತು ಐಟಿಐ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ. ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಈ ರಜೆ ಅನ್ವಯಿಸುವುದಿಲ್ಲ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular