HomeKarnatakaರಾಜ್ಯದ ನ್ಯಾಯಾಂಗ ಇತಿಹಾಸದಲ್ಲೇ ಮೊದಲ ಬಾರಿಗೆ ಆ.1 ಹೈಕೋರ್ಟ್ ಪೀಠದಲ್ಲಿ ಮಹಿಳಾ ನ್ಯಾಯಮೂರ್ತಿಗಳಿಂದ ಕಲಾಪ

ರಾಜ್ಯದ ನ್ಯಾಯಾಂಗ ಇತಿಹಾಸದಲ್ಲೇ ಮೊದಲ ಬಾರಿಗೆ ಆ.1 ಹೈಕೋರ್ಟ್ ಪೀಠದಲ್ಲಿ ಮಹಿಳಾ ನ್ಯಾಯಮೂರ್ತಿಗಳಿಂದ ಕಲಾಪ

ಬೆಂಗಳೂರು: ಕರ್ನಾಟಕದ ನ್ಯಾಯಾಂಗ ಇತಿಹಾಸದಲ್ಲೇ ಮೊದಲ ಬಾರಿಗೆ ಆಗಸ್ಟ್ 1 ರಂದು ಹೈಕೋರ್ಟ್ ಪೀಠದಲ್ಲಿ ಮಹಿಳಾ ನ್ಯಾಯಮೂರ್ತಿಗಳೇ ಕಲಾಪ ನಡೆಸಿಕೊಡಲಿದ್ದಾರೆ.

ಆ. 1ರಂದು ಹೈಕೋರ್ಟ್ ಧಾರವಾಡ ಪೀಠದಲ್ಲಿ ಒಟ್ಟು 10 ಮಹಿಳಾ ನ್ಯಾಯಮೂರ್ತಿಗಳ ನೇತೃತ್ವದ ನ್ಯಾಯಪೀಠಗಳು ಇಡೀ ದಿನದ ಕಲಾಪ ನಡೆಸಲಿವೆ. ಇದಕ್ಕಾಗಿ ಮಹಿಳಾ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಮೂರು ಪ್ರತ್ಯೇಕ ವಿಭಾಗೀಯ ಪೀಠ ಮತ್ತು ನಾಲ್ಕು ಏಕ ಸದಸ್ಯ ನ್ಯಾಯ ಪೀಠಗಳನ್ನು ರಚಿಸಲಾಗಿದೆ.

ಈ ಕುರಿತು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ಆದೇಶದಂತೆ ಹೈಕೋರ್ಟ್ ರಿಜಿಸ್ಟ್ರಾರ್(ನ್ಯಾಯಾಂಗ) ರೋಣ ವಾಸುದೇವ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಮಹಿಳಾ ಪ್ರಾತಿನಿಧ್ಯದ ಸಂಕೇತವಾಗಿ ಈ ಪ್ರಯತ್ನ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿಸೂಚನೆಯಂತೆ ಹಿರಿಯ ನ್ಯಾಯಮೂರ್ತಿ ಅನು ಸಿವರಾಮನ್ ಹಾಗೂ ನ್ಯಾಯಮೂರ್ತಿ ಕೆ.ಜಿ. ಶಾಂತಿ, ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ, ನ್ಯಾಯಮೂರ್ತಿ ಪಿ. ಶ್ರೀಸುಧಾ, ನ್ಯಾಯಮೂರ್ತಿ ಲಲಿತಾ ಕೆನ್ನಾಗಂಟಿ, ನ್ಯಾಯಮೂರ್ತಿ ಕೆ.ಎಸ್.ಹೇಮಲೇಖಾ ಅವರ ನೇತೃತ್ವದ ಮೂರು ವಿಭಾಗೀಯ ನ್ಯಾಯಪೀಠಗಳು ಕಲಾಪ ನಡೆಸಲಿವೆ.

ಇದರ ಜೊತೆಗೆ ನ್ಯಾಯಮೂರ್ತಿ ಚೆಲ್ಲಕೂರು ಸುಮಲತಾ, ನ್ಯಾಯಮೂರ್ತಿ ತಾರಾ ವಿತಸ್ತ ಗಂಜು, ನ್ಯಾಯಮೂರ್ತಿ ಕೆ.ಬಿ. ಗೀತಾ, ನ್ಯಾಯಮೂರ್ತಿ ರಾಜೇಶ್ವರಿ ಎನ್. ಹೆಗಡೆ ಅವರ ನೇತೃತ್ವದ ಏಕ ಸದಸ್ಯ ನ್ಯಾಯಪೀಠಗಳು ಕಲಾಪ ನಡೆಸಲಿವೆ.

ಮೊದಲ ಬಾರಿಗೆ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದಲ್ಲಿ ಆಗಸ್ಟ್ 1 ರಂದು ಸಂಪೂರ್ಣವಾಗಿ ಮಹಿಳಾ ನ್ಯಾಯಮೂರ್ತಿಗಳನ್ನು ಒಳಗೊಂಡ 7 ಪೀಠಗಳು ವಿಶೇಷವಾಗಿ ಕಲಾಪ ಕಾರ್ಯನಿರ್ವಹಿಸಲಿವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular