HomeKarnatakaBIG NEWS: ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ವಿಮೆ ಪರಿಹಾರ ಕಡಿತ: ಹೈಕೋರ್ಟ್ ಆದೇಶ

BIG NEWS: ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ವಿಮೆ ಪರಿಹಾರ ಕಡಿತ: ಹೈಕೋರ್ಟ್ ಆದೇಶ

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ವಿಮೆ ಪರಿಹಾರ ಕಡಿತವಾಗಲಿದೆ ಎಂದು ಹೈಕೋರ್ಟ್ ಹೇಳಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತಕ್ಕೆ ಒಳಗಾಗಿ ಮೃತಪಟ್ಟ ಚಾಲಕ ಅಥವಾ ಸವಾರನ ಕುಟುಂಬದವರಿಗೆ ಪೂರ್ಣ ಪ್ರಮಾಣದ ವಿಮಾ ಪರಿಹಾರ ನೀಡಲು ಸಾಧ್ಯವಿಲ್ಲವೆಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

 ಬೆಂಗಳೂರಿನಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಮೃತಪಟ್ಟ ಶ್ರೀನಿವಾಸ ಹರಿಕಂತ್ರ ಎಂಬುವರ ಕುಟುಂಬಕ್ಕೆ 3.44 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದ ಮೋಟಾರು ಅಪಘಾತ ಪರಿಹಾರ ನ್ಯಾಯಾಧಿಕರಣದ ತೀರ್ಪು ಪ್ರಶ್ನಿಸಿ ವಿಮಾ ಕಂಪನಿ ಸಲ್ಲಿಸಿದ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ ನ್ಯಾಯಮೂರ್ತಿ ಕೆ.ಬಿ. ಗೀತಾ ಅವರಿದ್ದ ಏಕ ಸದಸ್ಯ ನ್ಯಾಯ ಪೀಠದಿಂದ ಈ ಆದೇಶ ನೀಡಲಾಗಿದೆ.

ಅಪಘಾತಕ್ಕೊಳಗಾದ ಬೈಕ್ ಸವಾರ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿ ಸ್ವತಃ ತಪ್ಪು ಎಸಗಿರುವುದರಿಂದ ಆತನ ಕಾನೂನು ಬದ್ಧ ವಾರಸುದಾರರು ಪೂರ್ಣ ಪ್ರಮಾಣದ ಪರಿಹಾರ ಪಡೆಯಲು ಅರ್ಹರಾಗಿರುವುದಿಲ್ಲ. ಆದರೂ ವಾಹನದ ಮಾಲೀಕರು ಪಡೆದಿದ್ದ ವೈಯಕ್ತಿಕ ಅಪಘಾತ ರಕ್ಷಣೆ ವಿಮಾ ಪಾಲಿಸಿ ನಿಯಮಗಳ ಪ್ರಕಾರ ಗರಿಷ್ಠ 1 ಲಕ್ಷ ರೂ. ಪರಿಹಾರವನ್ನು ವಿಮಾ ಕಂಪನಿ ಪಾವತಿಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2015ರ ಫೆಬ್ರವರಿ 5ರಂದು ಶ್ರೀನಿವಾಸ್ ಬೈಕ್ ನಲ್ಲಿ ಹಿಂಬದಿ ಸವಾರನೊಂದಿಗೆ ಬನಶಂಕರಿಯಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದರು. ಗಂಭೀರವಾಗಿ ಗಾಯಗೊಂಡ ಶ್ರೀನಿವಾಸ್ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಮೃತ ಶ್ರೀನಿವಾಸ್ ಕುಟುಂಬದವರು ನ್ಯಾಯಾಧಿಕರಣಕ್ಕೆ ಅರ್ಜಿ ಸಲ್ಲಿಸಿ 3.44 ಲಕ್ಷ ರೂಪಾಯಿ ಪರಿಹಾರ ಪಡೆದುಕೊಂಡಿದ್ದು, ಇದನ್ನು ಪ್ರಶ್ನಿಸಿ. ವಿಮಾ ಕಂಪನಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಕುಡಿದು ವಾಹನ ಓಡಿಸಿದರೆ ಪೂರ್ಣ ಪ್ರಮಾಣದ ವಿಮಾ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular