ತುಮಕೂರು: ಮಾಜಿ ಸಚಿವ ಹಾಗೂ ಮಾಜಿ ಉಪಸಭಾಪತಿ ಸಿ.ವೀರಣ್ಣ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.
ವಯೋಸಹಜ ಆರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದ ಸಿ.ವೀರಣ್ಣ ಅವರು, ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬುಕ್ಕ ಪಟ್ಟಣದ ನಿವಾಸದಲ್ಲಿ ಅವರು ವಿಶ್ರಾಂತಿಯಲ್ಲಿದ್ದರು. ಈಗ ಅಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ.
ವೀರಣ್ಣ ಅವರು ಕೊರಟಗೆರೆ ಕ್ಷೇತ್ರದಿಂದ ಶಾಸಕರಾಗಿದ್ದರು. ರಾಮಕೃಷ್ಣ ಹೆಗಡೆ ಮತ್ತು ಎಸ್.ಆರ್ ಬೊಮ್ಮಾಯಿ ಸಂಪುಟಗಳಲ್ಲಿ ಸಚಿವರಾಗಿದ್ದರು. ಕೊರಟಗೆರೆ ತಾಲೂಕಿನ ಬುಕ್ಕ ಪಟ್ಟಣ ಗ್ರಾಮದಲ್ಲಿ ಮಕ್ಕಳ ಜೊತೆ ಕೃಷಿ ಜೀವನ ನಡೆಸುತಿದ್ದರು. ಇಂದು ಸಂಜೆ 4 ಗಂಟೆಗೆ ಸ್ವಗ್ರಾಮ ಬುಕ್ಕಪಟ್ಟಣದ ಜಮೀನಿನಲ್ಲಿ ಅವರ ಅಂತ್ಯಕ್ರಿಯೆ ನೆರೆವೇರಲಿದೆ.

