HomeIndiaಶಿಕ್ಷಣ ಮಂತ್ರಿ ಸ್ಥಾನದಿಂದ ಕೆಳಗಿಳಿಯಿರಿ ಧರ್ಮೇಂದ್ರ ಪ್ರಧಾನ್: ಮುಖದ ಮೇಲೆ ಹೊಡೆದ ಹಾಗೆ ನೇರವಾಗಿ ಹೇಳಿದ...

ಶಿಕ್ಷಣ ಮಂತ್ರಿ ಸ್ಥಾನದಿಂದ ಕೆಳಗಿಳಿಯಿರಿ ಧರ್ಮೇಂದ್ರ ಪ್ರಧಾನ್: ಮುಖದ ಮೇಲೆ ಹೊಡೆದ ಹಾಗೆ ನೇರವಾಗಿ ಹೇಳಿದ ನಟಿ ಜ್ಯೋತಿಕಾ

ನವದೆಹಲಿ: ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದಿನದಿಂದ ದಿನಕ್ಕೆ ಭಾರಿ ಕ್ರಾಂತಿಯ ರೂಪ ಪಡೆದುಕೊಳ್ಳುತ್ತಿದೆ. ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯ ಬಿಸಿ ಇದೀಗ ಬಾಲಿವುಡ್‌ನಿಂದ ದಕ್ಷಿಣ ಭಾರತದ ಚಿತ್ರರಂಗಕ್ಕೂ ವ್ಯಾಪಿಸಿದ್ದು, ಖ್ಯಾತ ನಟಿ ಜ್ಯೋತಿಕಾ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿ ಹೋರಾಟಕ್ಕೆ ಧುಮುಕಿದ್ದಾರೆ.

ಇತ್ತ ದೆಹಲಿಯಲ್ಲಿ ಕೇಂದ್ರ ಸರ್ಕಾರ ಹಾಗೂ ಪ್ರತಿಭಟನಾಕಾರರ ನಡುವೆ ಸಭೆಗಳು ನಡೆಯುತ್ತಿದ್ದರೂ, ಸಚಿವರ ರಾಜೀನಾಮೆ ಹೊರತುಪಡಿಸಿ ಬೇರೆ ಯಾವುದೇ ರಾಜಿಗೂ ಸಿದ್ಧವಿಲ್ಲ ಎಂದು ಕಾಕ್ರೋಚ್ ಜನತಾ ಪಾರ್ಟಿ ಸ್ಪಷ್ಟಪಡಿಸಿದೆ.

“ನಮ್ಮ ಮಕ್ಕಳೂ ನಿಮ್ಮಂತೆಯೇ ಬೆಳೆಯಬೇಕು”: ಜ್ಯೋತಿಕಾ ಭಾವನಾತ್ಮಕ  ಪೋಸ್ಟ್

https://www.instagram.com/p/DbM10nkSrXr/?utm_source=ig_web_copy_link&igsh=NTc4MTIwNjQ2YQ==

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಧರ್ಮೇಂದ್ರ ಪ್ರಧಾನ್ ಅವರೇ ಹುದ್ದೆಯಿಂದ ಕೆಳಗಿಳಿಯಿರಿ, ತಕ್ಷಣವೇ ರಾಜೀನಾಮೆ ನೀಡಿ ನಾನು ಈ ದೇಶದ ವಿದ್ಯಾರ್ಥಿಗಳು ಹಾಗೂ ಅವರ ಭವಿಷ್ಯದ ಜೊತೆ ನಿಲ್ಲುತ್ತೇನೆ. ಹೊಣೆಗಾರಿಕೆ, ಪ್ರಜಾಪ್ರಭುತ್ವವಾದಿ ಭಾರತ ಮತ್ತು ಸುಧಾರಿತ ಶಿಕ್ಷಣ ವ್ಯವಸ್ಥೆಯ ಪರವಾಗಿ ನಾನು ಧ್ವನಿ ಎತ್ತುತ್ತಿದ್ದೇನೆ.”

ಇದೇ ವೇಳೆ ಹೋರಾಟದ ಮುಂಚೂಣಿಯಲ್ಲಿರುವ ಸೋನಮ್ ವಾಂಗ್‌ಚುಕ್, ವಿದ್ಯಾರ್ಥಿ ನಾಯಕರಾದ ಅಭಿಜೀತ್ ದೀಪ್ಕೆ, ಸೌರವ್ ದಾಸ್ ಹಾಗೂ ಇಡೀ Gen-Z ಪೀಳಿಗೆಯನ್ನು ಶ್ಲಾಘಿಸಿದ ಅವರು, “ನಾನೊಬ್ಬಳು ತಾಯಿಯಾಗಿ ನನ್ನ ಮಕ್ಕಳನ್ನು ನಿಮ್ಮಂತೆಯೇ ಬೆಳೆಸಲು ಬಯಸುತ್ತೇನೆ. ನಮ್ಮಲ್ಲಿದ್ದ ಭಯವನ್ನು ತೊಡೆದು ಹಾಕಿದ್ದಕ್ಕೆ ಮತ್ತು ನಾವೇ ಭಾರತ ಎಂದು ಸಾಬೀತುಪಡಿಸಿದ್ದಕ್ಕೆ ಸಿಜೆಪಿಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಮತ್ತೊಂದೆಡೆ, ನೀಟ್ ಅಕ್ರಮ ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.ಸಿಜೆಪಿ ಪ್ರತಿನಿಧಿಗಳೊಂದಿಗೆ ಕೇಂದ್ರ ಸರ್ಕಾರ ಸಂಧಾನ ಸಭೆ ನಡೆಸಿದ್ದು, ಪರಿಹಾರ ಮತ್ತು ಕಾನೂನು ಸಂಬಂಧಿತ ವಿಷಯಗಳಿಗೆ ಸ್ಪಂದಿಸಿದೆ. ಆದರೆ ಧರ್ಮೇಂದ್ರ ಪ್ರಧಾನ್ ಅವರನ್ನು ರಾಜೀನಾಮೆ ಮಾಡಿಸಿದರೆ ಪ್ರತಿಭಟನೆ ಮತ್ತಷ್ಟು ಹೆಚ್ಚಾಗಬಹುದು ಎಂಬ ಭೀತಿಯಿಂದ ರಾಜೀನಾಮೆ ಬೇಡಿಕೆಯನ್ನು ತಳ್ಳಿಹಾಕಿದೆ.

ಸಿಜೆಪಿ ಖಡಕ್ ಎಚ್ಚರಿಕೆ: “ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯೇ ನಮ್ಮ ಪ್ರಮುಖ ಬೇಡಿಕೆ. ಸರ್ಕಾರ ಈ ಬಗ್ಗೆ ಸ್ಪಷ್ಟ ನಿರ್ಧಾರ ತಿಳಿಸದಿದ್ದರೆ ಇಂತಹ ಸಭೆಗಳು ಅರ್ಥಹೀನ. 24 ಗಂಟೆಯೊಳಗೆ ಬೇಡಿಕೆ ಈಡೇರದಿದ್ದರೆ ಬೃಹತ್ ಸಂಸತ್ ಮಾರ್ಚ್ ಆರಂಭಿಸುತ್ತೇವೆ” ಎಂದು ಸಿಜೆಪಿ ರಾಷ್ಟ್ರೀಯ ವಕ್ತಾರ ಅಶುತೋಷ್ ರಾಂಕಾ ಎಚ್ಚರಿಸಿದ್ದಾರೆ.

ವಿದ್ಯಾರ್ಥಿ ಹೋರಾಟದ ಕಾವು ಹೆಚ್ಚಾಗುತ್ತಿದ್ದಂತೆ ದೆಹಲಿ ಪೊಲೀಸರು ಭದ್ರತೆಯನ್ನು ತೀವ್ರಗೊಳಿಸಿದ್ದಾರೆ, ಜಂತರ್ ಮಂತರ್ ಸುತ್ತಲೂ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದ್ದು, ಭಾರಿ ಭದ್ರತೆ ಹೆಚ್ಚಿಸಲಾಗಿದೆ.ಮುನ್ನೆಚ್ಚರಿಕಾ ಕ್ರಮವಾಗಿ ನವದೆಹಲಿ ವ್ಯಾಪ್ತಿಯ 18 ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಸಾರ್ವಜನಿಕ ಸಂಚಾರಕ್ಕೆ ಮುಚ್ಚಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular