HomeLatest NewsBREAKING: ಪ್ರಧಾನಿ ಮೋದಿ ವಿದ್ಯಾರ್ಥಿಗಳ ಕ್ಷಮೆ ಕೇಳಲಿ: ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು:...

BREAKING: ಪ್ರಧಾನಿ ಮೋದಿ ವಿದ್ಯಾರ್ಥಿಗಳ ಕ್ಷಮೆ ಕೇಳಲಿ: ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು: ರಾಹುಲ್ ಗಾಂಧಿ ಆಗ್ರಹ

ನವದೆಹಲಿ: ನೀಟ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸಂಪುಟದಿಂದಲೇ ವಜಾಗೊಳಿಸಬೇಕು ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ಶಾಂತಿಯುತವಾಗಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರೆ ಅವರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ. ಪೆಲೆಟ್ ಗನ್ ದಾಳಿ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ವಿದ್ಯಾರ್ಥಿಗಳ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿದ್ಯಾರ್ಥಿಗಳ ಭವಿಷ್ಯ ನಾಶದ ಪ್ರತೀಕ. ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಮೂರು ಬೇಡಿಕೆಗಳನ್ನು ಇಟ್ಟಿದ್ದಾರೆ. ಬೇಡಿಕೆಗಳಲ್ಲಿ ಯಾವುದೇ ರಾಜಿಯಿಲ್ಲ. ಧರ್ಮೇಂದ್ರ ಪ್ರಧಾನ್ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಅವರನ್ನು ಶಿಕ್ಷಣ ಇಲಾಖೆಯಿಂದ ತೆಗೆದು ಹಾಕಿ ಬೇರೆ ಇಲಾಖೆಯಲ್ಲಿ ಮಂತ್ರಿ ಸ್ಥಾನ ನೀಡಿದರೆ ಸಹಿಸಲ್ಲ. ಕೇಬಿನೆಟ್ ನಿಂದಲೇ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಾಠಿಚಾರ್ಜ್ ಹಾಗೂ ಪೆಲೆಟ್ ಗನ್ ದಾಳಿಗೊಳಗಾಗಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಚಿಕಿತ್ಸಾ ವೆಚ್ಚ, ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ಸಂದೇಶದ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ನಿಮ್ಮ ಸಲಹೆಯಿಂದ ಏನೂ ಆಗುವುದಿಲ್ಲ. ವಿಡಿಯೋ ಮಾಡಿ ಸಲಹೆಗಳನ್ನು ಕೊಡಬೇಡಿ. ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸುವುದೊಂದೇ ಎಲ್ಲದಕ್ಕೂ ಪರಿಹಾರ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular