HomeLatest NewsBREAKING: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

BREAKING: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆ, ಆಕ್ರೋಶಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನೀಟ್ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ, ಆಕ್ರೋಶಗಳು ವ್ಯಕ್ತವಾಗಿತ್ತು. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಒತ್ತಾಯಿಸಿದ್ದವು. ಅಲ್ಲದೇ ದೆಹಲಿಯ ಜಂತರ್-ಮಂತರ್ ನಲ್ಲಿ ವಿದ್ಯಾರ್ಥಿಗಳು ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ಮುಂದುವರೆಸಿದ್ದರು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಸರ್ಕಾರ ಕೊನೆಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದಿದೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಸುದೀರ್ಘ ಪತ್ರ ಬರೆದಿರುವ ಧರ್ಮೇಂದ್ರ ಪ್ರಧಾನ್, ದೇಶ ನಿರ್ಮಾಣವಾಗುವ ಪರಿಸ್ಥಿತಿಯ ಲಾಭವನ್ನು ರಾಷ್ಟ್ರ ವಿರೋಧಿ ಶಕ್ತಿಗಳು ಪಡೆಯಬಾರದು. ದೇಶದ ಏಕತೆ ಹಾಗೆಯೇ ಇಳಿಯಬೇಕು. ವಿದ್ಯಾರ್ಥಿಗಳ ಭವಿಷ್ಯವು ಕಾನೂನು ತೊಡಕುಗಳಲ್ಲಿ ಸಿಲುಕಬಾರದು ನಮ್ಮ ಮಕ್ಕಳು ತಮ್ಮ ಭವಿಷ್ಯವನ್ನು ಓದಿನಲ್ಲಿ ಕಳೆಯಬೇಕು. ವೃತ್ತಿ ಜೀವನವನ್ನು ರೂಪಿಸಿಕೊಳ್ಳುವತ್ತ ಗಮನ ಹರಿಸಬೇಕು. ಇದನ್ನು ಪರಿಗಣಿಸಿ ನಾನು ನನ್ನ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ ನೀಟ್ ಪರೀಕ್ಷಾ ಅಕ್ರಮದ ವಿರುದ್ಧ ಕೈಕೊಂಡಿರುವ ಕಾನೂನು ಕ್ರಮಗಳ ಬಗ್ಗೆಯೂ ವಿದ್ಯಾರ್ಥಿಗಳಿಗೆ ವಿವರಿಸುವ ನಿಟ್ಟಿನಲ್ಲಿ ಮಾಹಿತಿಗಳನ್ನು ನೀಡಿದ್ದಾರೆ.

ಮೇ 3 ರಂದು ನೀಟ್ ಪರೀಕ್ಷೆಯಲ್ಲಿ ಅಕ್ರಮ ಕಂಡುಬಂದ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಲಾಗಿತ್ತು. ಜೂನ್ 21ರಂದು ಮರು ಪರೀಕ್ಷೆಗೆ ನಿರ್ವಹಣೆ ಮಾಡಲಾಗಿತ್ತು. ಅಕ್ರಮಗಳನ್ನು ತಡೆಯಲು ಮುಂದಿನ ವರ್ಷದಿಂದ ಸಿಬಿಟಿ ಮಾದರಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಪರೀಕ್ಷಾ ಮಾಫಿಯಾದಿಂದಾಗಿ ಯಾವೊಬ್ಬ ವಿದ್ಯಾರ್ಥಿಗೂ ಅನ್ಯಾಯವಾಗಬಾರದು ಎಂಬುದು ನನ್ನ ಅಭಿಪ್ರಾಯ. ಜೂನ್ 16ರಂದು ನಡೆದ ನೀಟ್ ಮರುಪರೀಕ್ಷೆಯಲ್ಲಿ ಹಲವು ಬಡಕುಟುಂಬಗಳ ವಿದ್ಯಾರ್ಥಿಗಳಿಗೆ ಯಶಸ್ಸು ಸಿಕಿದೆ.

ಪ್ರಮುಖ ಜವಾಬ್ದಾರಿಯುತ ಸ್ಥಾನದಲ್ಲಿರುವ ನಾಯಕರು ವಿದ್ಯಾರ್ಥಿಗಳ ದಾರಿ ತಪ್ಪಿಸಲು ಯತ್ನಿಸಿದ್ದು ನನಗೆ ನೋವು ತಂದಿದೆ. ಕಳೆದ 10 ದಿನಗಳಿಂದ ನಡೆದ ಘಟನೆಗಳಿಂದಾಗಿ ನನಗೆ ತೀವ್ರ ದುಃಖವಾಗಿದೆ. ಇದು ನನ್ನ ವೈಯಕ್ತಿಕ ಪ್ರತಿಷ್ಠೆಯ ವಿಷಯವಲ್ಲ. ಯುವ ಶಕ್ತಿಯನ್ನು ಭ್ರಮೆಯ ಸುಳಿಯಲ್ಲಿ ಸಿಲುಕಲು ಬಿಡುವುದಿಲ್ಲ. ದೆಹಲಿಯ ಜಂತರ್-ಮಂತರ್ ನಲ್ಲಿ ನಡೆದ ಪ್ರತಿಭಟನೆ ಹಾಗೂ ಈ ಪರಿಸ್ಥಿತಿಯ ಲಾಭವನ್ನು ರಾಷ್ಟ್ರ ವಿರೋಧಿ ಶಕ್ತಿಗಳು ಪಡೆಯಬಾರದು. ದೇಶದ ವಿದ್ಯಾರ್ಥಿಗಳ ಗಮನ ಅಭ್ಯಾಸ ಹಾಗೂ ವೃತ್ತಿ ಜೀವನದ ಮೇಲಿರಬೇಕು. ದೇಶದ ಯುವ ಜನತೆಯ ಆಕಾಂಕ್ಷೆಗಳನ್ನು ಸದಾ ಗೌರವಿಸುತ್ತೇನೆ.ಈವರೆಗೆ ದೇಶ ಸೇವೆಗೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular