HomeLatest NewsNEET ಅಕ್ರಮ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪತ್ರದಲ್ಲಿರುವ ಅಂಶಗಳೇನು?

NEET ಅಕ್ರಮ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪತ್ರದಲ್ಲಿರುವ ಅಂಶಗಳೇನು?

ನವದೆಹಲಿ: ನೀಟ್ ಯುಜಿ- 2026 ಪರೀಕ್ಷೆಯಲ್ಲಿನ ಅಕ್ರಮ ಮತ್ತು ನಂತರದ ವಿವಾದಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಚಿವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದು ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಪ್ರಧಾಅನ್ ರಾಜೀನಾಮೆ ಪತ್ರದಲ್ಲಿರುವ ಪ್ರಮುಖ ಅಂಶಗಳು ಈ ಕೆಳಗನಂತಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

NEET ಅಕ್ರಮದ ಹೊಣೆ:
ಮೇ 3, 2026 ರಂದು ನಡೆದ NEET-UG ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದವು. ಕೇಂದ್ರ ಸರ್ಕಾರ ತಕ್ಷಣ ಇದನ್ನು ಗಂಭೀರವಾಗಿ ಪರಿಗಣಿಸಿ CBI ತನಿಖೆಗೆ ಆದೇಶಿಸಿತು. ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆಯ ದಿನಾಂಕವನ್ನೂ ಘೋಷಿಸಲಾಯಿತು. ಮುಂದಿನ ವರ್ಷದಿಂದ ಪರೀಕ್ಷೆಯನ್ನು CBT ಮೋಡ್‌ನಲ್ಲಿ ನಡೆಸಲು ನಿರ್ಧರಿಸಲಾಯಿತು.

20 ಲಕ್ಷ ವಿದ್ಯಾರ್ಥಿಗಳ ಪರೀಕ್ಷೆ ಯಶಸ್ವಿ:
“Whole of government approach” ಅಡಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ಸಹಕಾರದಿಂದ ಜೂನ್ 21, 2026 ರಂದು 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಮರುಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಜುಲೈ 16 ರಂದು ಫಲಿತಾಂಶ ಪ್ರಕಟವಾಯಿತು. ಬಡ ಹಿನ್ನೆಲೆಯಿಂದ ಬಂದ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

ರಾಜೀನಾಮೆಗೆ ಕಾರಣ:
“ಕಳೆದ 10 ದಿನಗಳ ಬೆಳವಣಿಗೆಗಳು ನನ್ನನ್ನು ದುಃಖಿತಗೊಳಿಸಿವೆ. ಇದು ನನ್ನ ವೈಯಕ್ತಿಕ ಪ್ರತಿಷ್ಠೆಯ ವಿಷಯವಲ್ಲ. ರಾಷ್ಟ್ರ ವಿರೋಧಿ ಶಕ್ತಿಗಳು ಈ ಪರಿಸ್ಥಿತಿಯ ಲಾಭ ಪಡೆಯಬಾರದು. ದೇಶದ ಏಕತೆ ಉಳಿಯಬೇಕು. ಯಾವುದೇ ವಿದ್ಯಾರ್ಥಿಯ ಭವಿಷ್ಯ ಕಾನೂನು ಚಕ್ರವ್ಯೂಹದಲ್ಲಿ ಸಿಲುಕಬಾರದು” ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

“ನಮ್ಮ ಮಕ್ಕಳು ಓದಿನಲ್ಲಿ ಸಮಯ ಕಳೆಯಬೇಕು, ವೃತ್ತಿ ನಿರ್ಮಾಣದ ಮೇಲೆ ಗಮನ ಹರಿಸಬೇಕು” ಎಂಬ ಕಾರಣಕ್ಕೆ ತಾವು ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.

4 ದಶಕದ ಸೇವೆ:
“ಕಳೆದ 4 ದಶಕಗಳಿಂದ ವಿದ್ಯಾರ್ಥಿ, ಶಿಕ್ಷಕ ಮತ್ತು ಶಿಕ್ಷಣ ಸುಧಾರಣೆಗೆ ನನ್ನನ್ನು ಸಮರ್ಪಿಸಿಕೊಂಡಿದ್ದೇನೆ. ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ರಾಷ್ಟ್ರಸೇವೆ ಮಾಡಲು ಅವಕಾಶ ಸಿಕ್ಕಿದ್ದಕ್ಕೆ ಕೃತಜ್ಞ” ಎಂದು ಪ್ರಧಾನ್ ಹೇಳಿದ್ದಾರೆ.

“ಭವಿಷ್ಯದಲ್ಲೂ ಭಾರತ ಮಾತೆ, ಒಡಿಶಾ ಜನತೆ ಮತ್ತು ದೇಶದ ಯುವಕರ ಆಕಾಂಕ್ಷೆಗಳ ಈಡೇರಿಕೆಗೆ ಶ್ರಮಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular