ನವದೆಹಲಿ: ನೀಟ್ ಅಕ್ರಮದ ವಿರುದ್ಧ ಕಾಂಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ವಿದ್ಯಾರ್ಥಿಗಳು, ಯುವಜನತೆ ನಡೆಸಿದ ಹೋರಾಟದ ಫಲವಾಗಿ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ದೆಹಲಿ ಮಾಜಿ ಸಿಎಂ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದಾರೆ. ಕೊನೆಗೂ ಸರ್ಕಾರ ತಲೆಬಾಗಲೇಬೇಕಾಯಿತು. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು ಎಂದು ತಿಳಿಸಿದ್ದಾರೆ.
ಇದು ಪ್ರಜಾಪ್ರಭುತ್ವದ ಅತಿ ದೊಡ್ದ ಗೆಲುವು. ಇನ್ಮುಂದೆ ನೀಟ್ ಪರೀಕ್ಷೆಯಲ್ಲಿ ಅಗತ್ಯ ಬದಲಾವಣೆ ತರಬೇಕು ಎಂದು ಕೇಜ್ರಿವಾಲ್ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಸ್ವಾಗತಿಸುತ್ತೇನೆ. ದೇಶದ ಜನತೆ, ಅದರಲ್ಲೂ ವಿಶೇಷವಾಗಿ ಯುವಕರು ಮತ್ತು Gen Z ಯುವಪೀಳಿಗೆಯ ಹೋರಾಟದ ಮುಂದೆ ಕೇಂದ್ರ ಸರ್ಕಾರ ತಲೆಬಾಗಿಬೇಕಾದ ಪರಿಸ್ಥಿತಿ ಎದುರಾಯಿತು. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು. ಇದರಿಂದ ಸಂವಿಧಾನದ ಮೌಲ್ಯಗಳ ಮೇಲೆ ಜನರ ನಂಬಿಕೆ ಗಟ್ಟಿಯಾಗುತ್ತದೆ. ಆದರೂ ದೇಶದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಘಟನೆಗಳನ್ನು ಸಂಪೂರ್ಣವಾಗಿ ತಡೆಯಲು `ನೀಟ್’ ಪರೀಕ್ಷಾ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಗಳನ್ನು ತರಬೇಕು ಎಂದು ಒತ್ತಾಯಿಸಿದ್ದಾರೆ.

