HomeKarnatakaRAIN ALERT: ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ

RAIN ALERT: ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದ್ದು, ಇಂದು ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಭಾರಿ ಮಳೆಯಾಗಲಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಕರಾವಳಿ ಭಾಗದ ಜನರು ಹಾಗೂ ಮೀನುಗಾರರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಹಾಗೂ ದಕ್ಷಿಣ ಒಳ ನಾಡಿನ ಜಿಲ್ಲೆಗಳಲ್ಲಿಯೂ ಇಂದು ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಬಾಗಲಕೋಟೆ, ಬೀದರ್, ವಿಜಯಪುರ, ಧಾರವಾಡ, ಗದಗ್, ರಾಯಚೂರು, ಹಾವೇರಿ, ಯಾದಗಿರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.

ರಾಜಧಾನಿ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular