ಬೆಂಗಳೂರು: ನಾಳೆ ಜುಲೈ 27 ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ರಾಜ್ಯದ ಸಂಸದರ ಸಭೆ ಕರೆದಿದ್ದಾರೆ. ಬರ ಪರಿಸ್ಥಿತಿ ಬಗ್ಗೆ ಚರ್ಚಿಸುವ ನಿಟ್ಟಿನಲ್ಲಿ ಈ ಸಭೆ ಕರೆಯಲಾಗಿದೆ.
ನಾಳೆ ಸಂಜೆ 6:30ಕ್ಕೆ ಕರ್ನಾಟಕ ಭವನದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಸಂಸದರ ಸಭೆ ಕರೆಯಲಾಗಿದ್ದು, ಬರ ಪರಿಸ್ಥಿತಿ, ಕಾವೇರಿ ನದಿ ನೀರು ವಿವಾದ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಮಾಲೋಚನೆ ನಡೆಯಲಿದೆ.
ಈ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದು, ಬರ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರದ ಬಳಿ ಚರ್ಚಿಸಲು ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲಾಗುವುದು. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ಸೋಮವಾರ ಸಂಸದರ ಸಭೆ ನಡೆಸಲಾಗುವುದು ಎಂದರು.
ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಲು ಸಾಧ್ಯವಿಲ್ಲ ಎಂದು ಕಾವೇರಿ ನೀರು ನಿರ್ವಾಹಣಾ ಸಮಿತಿ ಮುಂದೆ ಹೇಳಲಾಗಿದೆ. ಅವರಿಗೂ ಪರಿಸ್ಥಿತಿಯ ಬಗ್ಗೆ ಅರಿವಿದೆ. ಪ್ರಧಾನಿ ಮೋದಿ ಅವರು ಸಹ ಎಲ್ ನೀನೋ ಪರಿಣಾಮದ ಬಗ್ಗೆ ಮಾತನಾಡಿದ್ದಾರೆ. ಈ ಎಚ್ಚರಿಕೆಯನ್ನು ನಾವು ಕಡೆಗಣಿಸಬಾರದು. ನಾನು ಸಹ ಪ್ರಧಾನಿಯವರಿಗೆ ಬರ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದೇನೆ. ಡಿಸಿಎಂ ಅವರೂ ಸಹ ಬರದ ಬಗ್ಗೆ ವಸ್ತುಸ್ಥಿತಿ ತಿಳಿಸಲು ಪ್ರಧಾನಿಯವರ ಬಳಿಗೆ ಶೀಘ್ರ ನಿಯೋಗ ಕಳುಹಿಸಲಿದ್ದಾರೆ ಎಂದರು.

