HomeKarnatakaBIG NEWS: KPSC ಪಶುವೈದ್ಯರ ನೇಮಕಾತಿಗೆ ತಡೆ, ತನಿಖೆಗೆ ಸಮಿತಿ ರಚನೆ

BIG NEWS: KPSC ಪಶುವೈದ್ಯರ ನೇಮಕಾತಿಗೆ ತಡೆ, ತನಿಖೆಗೆ ಸಮಿತಿ ರಚನೆ

ಬೆಂಗಳೂರು: ಪಶು ವೈದ್ಯಾಧಿಕಾರಿಗಳ 400 ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದ ಆರೋಪ ಹಿನ್ನೆಲೆಯಲ್ಲಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಈ ಹಿನ್ನೆಲೆಯಲ್ಲಿ ಅಂತಿಮ ಆಯ್ಕೆ ಪಟ್ಟಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದ್ದು, ಆರೋಪಗಳ ಬಗ್ಗೆ ವಿಚಾರಣೆ ನಡೆಸಲು ನಾಲ್ವರು ಸದಸ್ಯರನ್ನೊಳಗೊಂಡ ಉಪ ಸಮಿತಿ ರಚಿಸಿ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಕೆ. ಜ್ಯೋತಿ ಭಾನುವಾರ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗದ ಹಿರಿಯ ಸದಸ್ಯರಾದ ಶಕುಂತಲಾ ಎಸ್. ದುಂಡಿಗೌಡರ ಅಧ್ಯಕ್ಷತೆಯ ವಿಚಾರಣಾ ಸಮಿತಿಯಲ್ಲಿ ಎಂ.ವಿ. ರಾಮಕೃಷ್ಣ ಪ್ರಸಾದ್, ಶಿವನಗೌಡ ಮತ್ತು ಎಲ್ಟ್ರಿಡಾ ಡಿ ಸಿಲ್ವಾ ಅವರನ್ನು ಸದಸ್ಯರಾಗಿ ನೇಮಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೇಮಕಾತಿ ಪರೀಕ್ಷೆಯ ಪ್ರತಿ ಹಂತವನ್ನು ಮತ್ತು ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿ ಒಂದು ವಾರದೊಳಗೆ ವಾಸ್ತವಾಂಶಗಳ ವರದಿಯನ್ನು ಆಯೋಗಕ್ಕೆ ಸಲ್ಲಿಸಬೇಕು. ಇದಕ್ಕಾಗಿ ಉಪ ಸಮಿತಿಗೆ ಅಗತ್ಯವಾದ ಮಾಹಿತಿ ಒದಗಿಸಲು ಕಾರ್ಯದರ್ಶಿ ಅವರನ್ನು ಹಾಗೂ ಕಾನೂನು ಮಾಹಿತಿ ಒದಗಿಸಲು ಕಾನೂನು ಕೋಶದ ಮುಖ್ಯಸ್ಥರನ್ನು ಸಮನ್ವಯ ಅಧಿಕಾರಿಗಳಾಗಿ ನೇಮಿಸಲಾಗಿದೆ.

ಆಂತರಿಕ ವಿಚಾರಣಾ ಉಪ ಸಮಿತಿ ವರದಿ ಸಲ್ಲಿಸುವವರೆಗೆ ಜುಲೈ 17 ರಂದು ಹೊರಡಿಸಲಾಗಿದ್ದ ಪಶುವೈದ್ಯಾಧಿಕಾರಿಗಳ ಅಂತಿಮ ಆಯ್ಕೆಪಟ್ಟಿ ತಡೆಹಿಡಿಯಲು ಆಯೋಗದ ಸಭೆಯಲ್ಲಿ ನಿರ್ಣಯಿಸಲಾಗಿದೆ. ಆಯೋಗವು ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ನ್ಯಾಯ ಸಮ್ಮತತೆ ಹಾಗೂ ಸಾರ್ವಜನಿಕರ ವಿಶ್ವಾಸ ಕಾಪಾಡಲು ಬದ್ಧವಾಗಿದ್ದು, ವಿಚಾರಣಾ ವರದಿ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಯದರ್ಶಿ ತಿಳಿಸಿದ್ದಾರೆ.

ಪಶು ವೈದ್ಯರ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪಶು ವೈದ್ಯ ಡಾ. ಮಂಜುನಾಥ್ ಎಂಬುವರು ನೀಡಿದ ದೂರು ಆಧರಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಂತಿಮ ಆಯ್ಕೆ ಪಟ್ಟಿಯಲ್ಲಿರುವ 21 ಜನರ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಅನುಮಾನವಿದ್ದು, ಕೆಪಿಎಸ್ಸಿಯಿಂದ ಅಮಾನತುಗೊಂಡಿರುವ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತಿತರರನ್ನು ಆರೋಪಿಗಳೆಂದು ಉಲ್ಲೇಖಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular