ರಾಮನಗರ: ಕನಕಪುರ ತಾಲೂಕಿನ ಉಯ್ಯಂಬಳ್ಳಿಯ ಚೀಲಂದವಾಡಿ ರಸ್ತೆ ಸಿದ್ದಪ್ಪಾಜಿ ದೇವಾಲಯದ ಸಮೀಪ ಫಾರ್ಮ್ ಹೌಸ್ ಬಳಿ ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ವೆಂಕಟೇಶ್(45) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಭಾನುವಾರ ಸಂಜೆ 15 ಕ್ಕೂ ಹೆಚ್ಚು ದುಷ್ಕರ್ಮಿಗಳು ವೆಂಕಟೇಶನ ಫಾರ್ಮ್ ಹೌಸ್ ಬಳಿ ಕಾದು ಕುಳಿತಿದ್ದರು. ವೆಂಕಟೇಶ್ ಮೇಲೆ ಏಕಾಏಕಿ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಮುಖ, ಕುತ್ತಿಗೆಗೆ ಬಲವಾಗಿ ಹೊಡೆದಿರುವುದರಿಂದ ಸ್ಥಳದಲ್ಲಿಯೇ ವೆಂಕಟೇಶ್ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ಅನಂತಕುಮಾರ್, ಎಸ್ ಶಮಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

