HomeKarnatakaಸಂಪುಟ ವಿಸ್ತರಣೆ: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಡಿ.ಕೆ.ಶಿವಕುಮಾರ್; 12ರಿಂದ 15 ಮಂದಿ ಹೊಸಬರಿಗೆ...

ಸಂಪುಟ ವಿಸ್ತರಣೆ: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಡಿ.ಕೆ.ಶಿವಕುಮಾರ್; 12ರಿಂದ 15 ಮಂದಿ ಹೊಸಬರಿಗೆ ಸ್ಥಾನ ಸಾಧ್ಯತೆ

ಬೆಂಗಳೂರು: ರಾಜ್ಯ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕ ಬುಲವ್ ಮೇರೆಗೆ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ನಿಟ್ಟಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕೂಡ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ದು, ಇಂದು ಸಂಜೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ.

ಈ ನಡುವೆ ಸಚಿವ ಸ್ಥಾನದ ಆಕಾಂಕ್ಷಿಗಳು ಕೂದ ದೆಹಲಿಯತ್ತ ಮುಖ ಮಾಡಿದ್ದಾರೆ. ಮಂತ್ರಿ ಸ್ಥಾನಕ್ಕಾಗಿ ಲಾಭಿಯೂ ತೀವ್ರಗೊಂಡಿದೆ. ಮುಖ್ಯಮಂತ್ರಿಗಳು ದೆಹಲಿಗೆ ತೆರಳುವ ಮುನ್ನ ಸಂತೋಷ್ ಲಾಡ್ ಮತ್ತು ಶಾಸಕ ಗಣೇಶ್ ಸೇರಿದಂತೆ ಹಲವು ಶಾಸಕರು ಅವರನ್ನು ಭೇಟಿಯಾಗಿ ತಮ್ಮ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದಾರೆ. ಈ ಬಾರಿ ಸಂಪುಟದಲ್ಲಿ ಹೊಸ ಮುಖಗಳಿಗೆ ಹೆಚ್ಚಿನ ಅವಕಾಶ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ. 20 ಸಚಿವ ಸ್ಥಾನಗಳ ಪೈಕಿ 12ರಿಂದ 15 ಮಂದಿ ಹೊಸಬರು ಸೇರ್ಪಡೆಯಾಗಬಹುದು ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular