HomeKarnatakaಲಾಡ್ಜ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಉದ್ಯಮಿ

ಲಾಡ್ಜ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಉದ್ಯಮಿ

ಶಿವಮೊಗ್ಗ: ಕ್ರಷರ್ ಉದ್ಯಮಿಯೊಬ್ಬರು ಲಾಡ್ಜ್ ರೂಮ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಗೋಪಾಳ ಬಡಾವಣೆಯ ನಿವಾಸಿ ನವೀನ್ ಕುಮಾರ್ ಬಳಗಾರ್ ಅಲಿಯಾಸ್ ಬಸವರಾಜ್ (42) ಆತ್ಮಹತ್ಯೆಗೆ ಶರಣಾದ ಉದ್ಯಮಿ. ಶಿವಮೊಗ್ಗ ನಗರದ ಲಾಡ್ಜ್‌ ನಲ್ಲಿ ರೂಂ ಬಾಡಿಗೆಗೆ ಪಡೆದುಕೊಂಡು ಅಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ.

ಕಳೆದ 5 ವರ್ಷಗಳಿಂದ ಉದ್ಯಮದಲ್ಲಿ ಉಂಟಾಗಿದ್ದ ನಷ್ಟ ಹಾಗೂ ವಿಪರೀತ ಸಾಲದ ಹೊರೆಯಿಂದಾಗಿ ಅವರು ಮನನೊಂದಿದ್ದರು ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular