HomeKarnatakaBREAKING : ರಾಜ್ಯದಲ್ಲಿ 2 ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಲಭ್ಯ ; ನೂತನ...

BREAKING : ರಾಜ್ಯದಲ್ಲಿ 2 ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಲಭ್ಯ ; ನೂತನ ಸಚಿವರ ಪ್ರಮಾಣ ವಚನ ವಿಳಂಬ.!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಸಚಿವರ ಅಂತಿಮ ಪಟ್ಟಿ ಸಿದ್ಧವಾಗಿದ್ದರೂ, ಹೊಸ ಸಚಿವರ ಪ್ರಮಾಣವಚನ ಸಮಾರಂಭಕ್ಕೆ ತಾತ್ಕಾಲಿಕ ವಿಳಂಬವಾಗುವ ಸಾಧ್ಯತೆ ಇದೆ. ಇದಕ್ಕೆ ಪ್ರಮುಖ ಕಾರಣ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜುಲೈ 30ರವರೆಗೆ ರಾಜ್ಯದಲ್ಲಿ ಲಭ್ಯವಿರುವುದಿಲ್ಲ ಎಂಬುದು.

ಹೌದು. ಮೂಲಗಳ ಪ್ರಕಾರ, ರಾಜ್ಯಪಾಲರು ನಾಳೆ (ಜುಲೈ 28) ಮಧ್ಯಾಹ್ನ ಇಂದೋರ್‌ಗೆ ಪ್ರಯಾಣ ಬೆಳೆಸಲಿದ್ದು, ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಜುಲೈ 30ರವರೆಗೆ ರಾಜಭವನದಲ್ಲಿ ಇರುವುದಿಲ್ಲ ಎಂದು ತಿಳಿದುಬಂದಿದೆ.

ಈ ನಡುವೆ, ಮುಖ್ಯಮಂತ್ರಿ ನೇತೃತ್ವದಲ್ಲಿ ಹೊಸ ಸಚಿವರ ಆಯ್ಕೆ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದ್ದು, ಸಚಿವರ ಅಂತಿಮ ಪಟ್ಟಿಯೂ ಸಿದ್ಧವಾಗಿದೆ ಎನ್ನಲಾಗಿದೆ. ಆದರೆ, ಹೊಸ ಸಚಿವರಿಗೆ ರಾಜ್ಯಪಾಲರ ಸಮ್ಮುಖದಲ್ಲಿಯೇ ಪ್ರಮಾಣವಚನ ಬೋಧಿಸಬೇಕಿರುವುದರಿಂದ, ಕಾರ್ಯಕ್ರಮವನ್ನು ಅವರ ವಾಪಸಾತಿಯ ಬಳಿಕವೇ ಆಯೋಜಿಸುವ ಸಾಧ್ಯತೆ ಹೆಚ್ಚಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೀಗಾಗಿ, ಸಚಿವ ಸ್ಥಾನಕ್ಕಾಗಿ ಕಾಯುತ್ತಿರುವ ಶಾಸಕರು ಮತ್ತು ರಾಜಕೀಯ ವಲಯದಲ್ಲಿ ಕುತೂಹಲ ಮತ್ತಷ್ಟು ಹೆಚ್ಚಿದ್ದು, ಜುಲೈ 30ರ ಬಳಿಕವೇ ಸಂಪುಟ ವಿಸ್ತರಣೆಯ ದಿನಾಂಕ ಅಂತಿಮಗೊಳ್ಳುವ ಸಾಧ್ಯತೆ ಇದೆ. ಸರ್ಕಾರದ ಅಧಿಕೃತ ಘೋಷಣೆಯತ್ತ ಎಲ್ಲರ ಗಮನ ನೆಟ್ಟಿದೆ.

ಈ ವಾರವೇ ಸಚಿವ ಸಂಪುಟ ವಿಸ್ತರಣೆ; ಸಿಎಂ ಡಿಕೆಶಿ

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕುರಿತ ಕುತೂಹಲಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೆರೆ ಎಳೆದಿದ್ದಾರೆ. ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸಚಿವ ಸಂಪುಟ ವಿಸ್ತರಣೆ ಕುರಿತು ಕೇಳಲಾದ ಪ್ರಶ್ನೆಗೆ, “ಈ ವಿಚಾರದಲ್ಲಿ ಮಾಧ್ಯಮಗಳು ಹೆಚ್ಚು ಆತುರದಲ್ಲಿವೆ. ಈ ವಾರದಲ್ಲೇ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ” ಎಂದು ಉತ್ತರಿಸಿದರು.

ಇಂದು ದೆಹಲಿಯಲ್ಲಿ ರಾಜ್ಯದ ಸಂಸದರೊಂದಿಗೆ ಸಭೆ ನಡೆಸಲಿರುವುದಾಗಿ ತಿಳಿಸಿದ ಅವರು, ರಾಜ್ಯದ ಬರ ಪರಿಸ್ಥಿತಿ, ನೀರಿನ ಲಭ್ಯತೆ, ಕಾವೇರಿ, ಮಹದಾಯಿ, ಮೇಕೆದಾಟು ಹಾಗೂ ಕೃಷ್ಣಾ ನದಿ ಯೋಜನೆಗಳು ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಸಂಸದರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ರಾಜ್ಯದ ಹಿತಾಸಕ್ತಿಯ ವಿಷಯಗಳಲ್ಲಿ ಎಲ್ಲ ಸಂಸದರನ್ನು ಒಂದೇ ವೇದಿಕೆಗೆ ಕರೆತಂದು ಸಹಕಾರ ಕೋರಲಾಗುತ್ತಿದೆ ಎಂದು ಹೇಳಿದ ಅವರು, ದೆಹಲಿ ಸಭೆಯ ಬಳಿಕ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು. ಅಲ್ಲದೆ, ರಾಜ್ಯದ ಹಿರಿಯ ರಾಜಕೀಯ ನಾಯಕರೊಂದಿಗೆ ಚರ್ಚಿಸಿ ಮುಂದಿನ ಕಾರ್ಯತಂತ್ರ ರೂಪಿಸಲಾಗುವುದು ಎಂದು ತಿಳಿಸಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular