HomeEntertainmentಅಶ್ಲೀಲವಾಗಿ ಟ್ರೋಲ್: ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಟ ಧ್ರುವಂತ್

ಅಶ್ಲೀಲವಾಗಿ ಟ್ರೋಲ್: ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಟ ಧ್ರುವಂತ್

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್- 12ರ ಖ್ಯಾತಿಯ ಕಿರುತೆರೆ ನಟ ಧ್ರುವಂತ್ ಅಲಿಯಾಸ್ ಚರಿತ್ ಬಾಳಪ್ಪ ಅವರಿಗೆ ಅಶ್ಲೀಲ ಟ್ರೋಲಿಗರ ಕಾಟ ಶುರುವಾಗಿದ್ದು, ಇದರಿಂದ ಬೇಸತ್ತು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ತಮ್ಮ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟಿದಾಗಿ ಟ್ರೋಲ್ ಮಾಡಿದವರ ವಿರುದ್ಧ ಧ್ರುವಂತ್ ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಠಾಣೆ ಹಾಗೂ ಬಸವೇಶ್ವರ ನಗರ ಸೈಬರ್ ಸೆಲ್ ನಲ್ಲಿ ದೂರು ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತೀಚೆಗೆ ಧ್ರುವಂತ್ ನೀಡಿದ ಒಂದು ಸಂದರ್ಶನದ ತುಣುಕುಗಳನ್ನು ಇಟ್ಟುಕೊಂಡು ಅಶ್ಲೀಲವಾಗಿ ಟ್ರೋಲ್ ಮಾಡಲಾಗುತ್ತಿದೆ. ಅದರಿಂದ ಅಸಮಾಧಾನಗೊಂಡಿರುವ ಅವರು ಕೆಲವು ಟ್ರೋಲ್ ಪೇಜ್​ಗಳ ವಿರುದ್ಧ ದೂರು ನೀಡಿದ್ದಾರೆ.

ನಾನು ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ನಟನಾಗಿದ್ದು, ಬಿಗ್ ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋನ ಫೈನಲಿಸ್ಟ್ ಆಗಿ ಸಾರ್ವಜನಿಕ ವ್ಯಕ್ತಿಯಾಗಿ ಸಮಾಜದಲ್ಲಿ ಗೌರವ ಮತ್ತು ವಿಶ್ವಾಸವನ್ನು ಸಂಪಾದಿಸಿದ್ದೇನೆ. ಸಾಮಾಜಿಕ ಜಾಲತಾಣಗಳಾದ ಇನ್​ಸ್ಟಾಗ್ರಾಮ್ ಮತ್ತು ಫೇಸ್​ಬುಕ್ ಮೂಲಕ ಉದ್ದೇಶಪೂರ್ವಕವಾಗಿ ನನ್ನ ವಿರುದ್ಧ ನಿರಂತರವಾಗಿ ಅವಾಚ್ಯ, ಅಶ್ಲೀಲ, ಮಾನಹಾನಿಕಾರಕ ಹಾಗೂ ಬೆದರಿಕೆ ಹಾಕುವ ರೀತಿಯ ಪೋಸ್ಟ್​ಗಳು, ಕಾಮೆಂಟ್​ಗಳು ಮತ್ತು ಸಂದೇಶಗಳನ್ನು ಪ್ರಕಟಿಸುತ್ತಿದ್ದಾರೆ ಎಂದು ಧ್ರುವಂತ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಕೃತ್ಯಗಳು ನನ್ನ ಮಾನಸಿಕ ನೆಮ್ಮದಿಗೆ ಧಕ್ಕೆ ಉಂಟುಮಾಡುವುದಲ್ಲದೇ ನನ್ನ ವೃತ್ತಿಜೀವನ, ಸಾರ್ವಜನಿಕ ಚಿತ್ರಣ, ಖ್ಯಾತಿ ಹಾಗೂ ಭವಿಷ್ಯದ ಉದ್ಯೋಗಾವಕಾಶಗಳ ಮೇಲೂ ಗಂಭೀರ ಪರಿಣಾಮ ಬೀರಿದೆ. ನಿರ್ಮಾಪಕರು, ನಿರ್ದೇಶಕರು, ಬ್ರಾಂಡ್​ಗಳು ಮತ್ತು ಇತರ ವೃತ್ತಿಪರರು ನನ್ನ ಬಗ್ಗೆ ತಪ್ಪು ಅಭಿಪ್ರಾಯ ಬೆಳೆಸುವಂತಹ ಪರಿಸ್ಥಿತಿಯನ್ನು ಸೃಷ್ಟಿಸಿವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ನನ್ನ ಗೌರವವನ್ನು ಉದ್ದೇಶಪೂರ್ವಕವಾಗಿ ಹಾಳುಮಾಡಲು ಹಾಗೂ ಸಾರ್ವಜನಿಕರಲ್ಲಿ ನನ್ನ ಬಗ್ಗೆ ದ್ವೇಷ ಹಾಗೂ ಅವಿಶ್ವಾಸ ಮೂಡಿಸುವ ಈ ಕೃತ್ಯಗಳು ಕಾಣಿಸುತ್ತವೆ. ಅವರು ನಿರಂತರವಾಗಿ ಅವಾಚ್ಯ ಪದಗಳಿಂದ ನಿಂದನೆ ಮಾಡುವುದು, ಸುಳ್ಳು ಮತ್ತು ಮಾನಹಾನಿಕಾರಕ ಆರೋಪಗಳನ್ನು ಹರಡುವುದು, ಬೆದರಿಕೆ ಹಾಕುವುದು, ನನ್ನ ಸಾಮಾಜಿಕ ಹಾಗೂ ವೃತ್ತಿಪರ ಬದುಕಿಗೆ ಧಕ್ಕೆ ಉಂಟುಮಾಡುವುದು ಹಾಗೂ ಸಾರ್ವಜನಿಕವಾಗಿ ಅವಮಾನಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ.

ಈ ಕೃತ್ಯಗಳಿಂದ ನನಗೆ ತೀವ್ರ ಮಾನಸಿಕ ಯಾತನೆ, ಸಾಮಾಜಿಕ ಅವಮಾನ ಉಂಟಾಗಿದೆ. ಆದ್ದರಿಂದ ಈ ರೀತಿ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಿ ನನ್ನ ತಂಟೆಗೆ ಬಾರದಂತೆ ಬಂದೋಬಸ್ತ್ ಮಾಡಿಕೊಡಬೇಕು ಎಂದು ಧ್ರುವಂತ್ ಅವರು ದೂರಿನಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular