HomeLatest NewsBIG NEWS : ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ ; ಸುಪ್ರೀಂಕೋರ್ಟ್‌ ಮಹತ್ವದ ಆದೇಶ

BIG NEWS : ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ ; ಸುಪ್ರೀಂಕೋರ್ಟ್‌ ಮಹತ್ವದ ಆದೇಶ

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ ನೀಡಿದ್ದು, ವಿಶೇಷ ತನಿಖಾ ತಂಡಕ್ಕೆ (SIT) ಎರಡು ವಾರಗಳೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಆದೇಶಿಸಿದೆ. ಜೊತೆಗೆ, ದೇಣಿಗೆ ನಿಧಿಗಳ ಲೆಕ್ಕಪತ್ರಗಳ ಪರಿಶೀಲನೆಗಾಗಿ ಎಸ್‌ಐಟಿ ತಂಡಕ್ಕೆ ಫೊರೆನ್ಸಿಕ್ ಆಡಿಟರ್‌ರನ್ನು ಸೇರಿಸುವಂತೆ ಸೂಚಿಸಿದ್ದು, ಪ್ರಕರಣದ ತನಿಖೆಗೆ ವೇಗ ನೀಡಿದೆ.

ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನವಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಮಹತ್ವದ ಆದೇಶಗಳನ್ನು ನೀಡಿದೆ. ಈ ಗಂಭೀರ ಪ್ರಕರಣದ ಕುರಿತು ಎರಡು ವಾರಗಳೊಳಗೆ ಸಮಗ್ರ ತನಿಖಾ ವರದಿ ಸಲ್ಲಿಸುವಂತೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (SIT) ಸುಪ್ರೀಂ ಕೋರ್ಟ್ ಸೂಚಿಸಿದೆ.

ರಾಮಮಂದಿರದ ದೇಣಿಗೆ ನಿಧಿಗಳ ದುರ್ಬಳಕೆ ಹಾಗೂ ಲೆಕ್ಕಪತ್ರಗಳ ದಾಖಲೆಗಳನ್ನು ಆಳವಾಗಿ ಪರಿಶೀಲಿಸುವುದು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಎಸ್‌ಐಟಿ ತಂಡಕ್ಕೆ ತಕ್ಷಣವೇ ಒಬ್ಬ ಫೊರೆನ್ಸಿಕ್ ಆಡಿಟರ್‌ರನ್ನು ಸೇರಿಸಬೇಕು ಎಂದು ನಿರ್ದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಾಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನ್ ಅವರನ್ನೊಳಗೊಂಡ ತ್ರಿಸಭ್ಯ ಪೀಠ ಸೋಮವಾರ ಈ ಪ್ರಕರಣದ ವಿಚಾರಣೆ ನಡೆಸಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಎಸ್‌ಐಟಿ ಅಧಿಕಾರಿಗಳು ಹಾಗೂ ಉತ್ತರ ಪ್ರದೇಶ ಪೊಲೀಸರು ಪ್ರಕರಣದ ಕುರಿತು ಅತ್ಯಂತ ಸೂಕ್ಷ್ಮವಾಗಿ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಪ್ರಮುಖ ಮಾಹಿತಿಯನ್ನು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ರಾಮಮಂದಿರದ ದೇಣಿಗೆ ವಿವರಗಳನ್ನು ಸಂಪೂರ್ಣ ಪಾರದರ್ಶಕವಾಗಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕೆಂಬ ಅರ್ಜಿದಾರರ ಮನವಿಗೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಪ್ರಸ್ತುತ ತಮ್ಮ ಸಂಪೂರ್ಣ ಗಮನ ತನಿಖೆಯ ಮೇಲೆಯೇ ಇದೆ. ಎಸ್‌ಐಟಿ ವರದಿ ಬಂದ ಬಳಿಕವೇ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿತು. ಈ ನಡುವೆ, ರಾಮಮಂದಿರದ ದೇಣಿಗೆ ನಿಧಿ ಕಳ್ಳತನ ಪ್ರಕರಣವನ್ನು ಸಿಬಿಐ (CBI) ಹಾಗೂ ಕ್ಯಾಗ್ (CAG) ಮೂಲಕ ತನಿಖೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ನ ಮುಂದಿನ ಆದೇಶಗಳ ಬಗ್ಗೆ ದೇಶಾದ್ಯಂತ ಕುತೂಹಲ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular