HomeKarnatakaJOB ALERT : ಜುಲೈ 29 ರಂದು ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ...

JOB ALERT : ಜುಲೈ 29 ರಂದು ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ದಿನಾಂಕ 29-07-2026 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಈ ನೇರ ಸಂದರ್ಶನದಲ್ಲಿ ಎಸ್. ಎಂ. ಎಫ್. ಈ. ಇಂಡಿಯಾ ಕ್ರೆಡಿಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.18 ರಿಂದ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ಪ್ರವೇಶ ಉಚಿತವಾಗಿದ್ದುಅಭ್ಯರ್ಥಿಗಳು ಪಿಯುಸಿ ಅಥವಾ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಹಾಗೂ ಆಧಾರ್ ಕಾರ್ಡ್‌ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ – 577205 ಇಲ್ಲಿಸಂದರ್ಶನಕ್ಕೆ ಹಾಜರಾಗಬಹುದು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು: 9380663606, 9108235132 ಅಥವಾ ಖುದ್ದಾಗಿ ಕಚೇರಿಗೆ ಭೇಟಿ ನೀಡಿ ಮಾಹಿತಿ‌ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳಾ ಪಾಲಿಟೆಕ್ನಿಕ್ : ಪ್ರಥಮ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಶಿವಮೊಗ್ಗ ಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಪ್ರಾಂಶುಪಾಲರ ಹಂತದಲ್ಲಿಯೇ ಮೆರಿಟ್ ಹಾಗೂ ರೋಸ್ಟರ್‌ಗನುಗುಣವಾಗಿ ಪ್ರವೇಶಾತಿ ಈಗಾಗಲೇ ಪ್ರಾರಂಭವಾಗಿದ್ದು, ಉಳಿದಿರುವ ಸೀಟು ಹಂಚಿಕೆಗಾಗಿ ಅರ್ಜಿ ಸಲ್ಲಿಸಲು ಜು.31 ಕಡೆಯ ದಿನವಾಗಿದೆ.

ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ -05 ಸೀಟುಗಳು, ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್- 01, ಕಮರ್ಷಿಯಲ್ ಪ್ರಾಕ್ಟಿಸ್(ಇಂಗ್ಲಿಷ್) -04 ಸೀಟುಗಳು ಲಭ್ಯವಿರುತ್ತದೆ.ಅಭ್ಯರ್ಥಿಗಳು ಪ್ರವೇಶ ಪಡೆಯಲು ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ/ಎನ್‌ಓಸಿ, 05 ವರ್ಷದ ವ್ಯಾಸಂಗ ಪ್ರಮಾಣ ಪತ್ರ(ಕ್ಷೇತ್ರ ಶಿಕ್ಷಣಾಧಿಕಾರಿಗಳು ದೃಢೀಕರಿಸಿದ ಸಹಿಯೊಂದಿಗೆ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಕನ್ನಡ ಮಾಧ್ಯಮ/ಗ್ರಾಮೀಣ ಅಭ್ಯರ್ಥಿ 1 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡಿರುವ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ ಹಾಗೂ 06 ಭಾವಚಿತ್ರಗಳನ್ನು ಸಲ್ಲಿಸಬೇಕು. ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ರವಿನಾಯಕ್ ಡಿ,- ಮೊ.ಸಂ: 7975155925ನ್ನು ಸಂಪರ್ಕಿಸಬಹುದೆಂದು ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ನ ಪ್ರಾಂಶುಪಾಲರು ತಿಳಿಸಿದ್ದಾರೆ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular