HomeKarnatakaBREAKING : ಬಾಗಲಕೋಟೆಯಲ್ಲಿ 40,000 ಲಂಚ ಸ್ವೀಕರಿಸುತ್ತಿದ್ದ ಖಜಾನೆ ಇಲಾಖೆ FDA ಲೋಕಾಯುಕ್ತ ಬಲೆಗೆ |Lokayukta...

BREAKING : ಬಾಗಲಕೋಟೆಯಲ್ಲಿ 40,000 ಲಂಚ ಸ್ವೀಕರಿಸುತ್ತಿದ್ದ ಖಜಾನೆ ಇಲಾಖೆ FDA ಲೋಕಾಯುಕ್ತ ಬಲೆಗೆ |Lokayukta Raid

ಬಾಗಲಕೋಟೆ : ಲಂಚ ಸ್ವೀಕರಿಸುತ್ತಿದ್ದ ವೇಳೆ ಖಜಾನೆ ಇಲಾಖೆಯ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ವಿನಾಯಕ ಹಿರೇಮಠ ಎಂದು ಗುರುತಿಸಲಾಗಿದೆ. ಅವರು ಜಮಖಂಡಿಯ ಖಜಾನೆ ಇಲಾಖೆಯಲ್ಲಿ ಎಫ್‌ಡಿಎ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಚೇತನ್ ತರತರಿ ಎಂಬುವವರ ಮಾವನ ನಿವೃತ್ತಿ ಪಿಂಚಣಿ ಮೊತ್ತವನ್ನು ಜಮಾ ಮಾಡುವ ಸಂಬಂಧದ ಕಡತವನ್ನು ಮುಂದುವರಿಸಲು ಆರೋಪಿಯು ₹70 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ. ಬಳಿಕ ಮಾತುಕತೆಯ ನಂತರ ₹40 ಸಾವಿರಕ್ಕೆ ಒಪ್ಪಂದವಾಗಿದ್ದು, ದೂರುದಾರರಿಂದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಾಯುಕ್ತ ಅಧಿಕಾರಿಗಳು ಆರೋಪಿಯಿಂದ ಲಂಚದ ಹಣವನ್ನು ವಶಪಡಿಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಲಂಚದ ವಿರುದ್ಧ ಲೋಕಾಯುಕ್ತ ನಡೆಸುತ್ತಿರುವ ಕಾರ್ಯಾಚರಣೆ ಮುಂದುವರಿದಿದ್ದು, ಸಾರ್ವಜನಿಕರು ಲಂಚಕ್ಕೆ ಬೇಡಿಕೆ ಬಂದರೆ ತಕ್ಷಣವೇ ಲೋಕಾಯುಕ್ತರಿಗೆ ದೂರು ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular