HomeLatest Newsಸಕ್ಕರೆ ನಾಡಿನ ಜನತೆಗೆ ಸಿಹಿ ಸುದ್ದಿ: ಮಂಡ್ಯದಲ್ಲಿ ಆಧಾರ್ ಸೇವಾ ಕೇಂದ್ರ ಸ್ಥಾಪನೆಗೆ ಕೇಂದ್ರ ಅನುಮೋದನೆ

ಸಕ್ಕರೆ ನಾಡಿನ ಜನತೆಗೆ ಸಿಹಿ ಸುದ್ದಿ: ಮಂಡ್ಯದಲ್ಲಿ ಆಧಾರ್ ಸೇವಾ ಕೇಂದ್ರ ಸ್ಥಾಪನೆಗೆ ಕೇಂದ್ರ ಅನುಮೋದನೆ

ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಂಡ್ಯದಲ್ಲಿ ‘ಆಧಾರ್ ಸೇವಾ ಕೇಂದ್ರ’ (4 ಇಸಿಎಂಪಿ ಕಿಟ್ಸ್ ಒಳಗೊಂಡ) ಸ್ಥಾಪಿಸಲು ಭಾರತ ಸರಕಾರವು ಅನುಮೋದನೆ ನೀಡಿದೆ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿಗೆ ಸ್ಪಂದಿಸಿದ ಕೇಂದ್ರದ ಸಚಿವ ಅಶ್ವಿನಿ ವೈಷ್ಣವ್ ಅವರು; ಮಂಡ್ಯದಲ್ಲಿ ಆಧಾರ್ ಸೇವಾ ಕೇಂದ್ರ ಸ್ಥಾಪಿಸುವ ಬಗ್ಗೆ ನನಗೆ ಪತ್ರ ಮುಖೇನ ತಿಳಿಸಿದ್ದಾರೆ. ಈ ಕೇಂದ್ರದ ಸ್ಥಾಪನೆಯಿಂದ ಮಂಡ್ಯ ಮತ್ತು ಸುತ್ತಮುತ್ತಲ ಪ್ರದೇಶದ ಜನರಿಗೆ ಆಧಾರ್ ನೋಂದಣಿ ಹಾಗೂ ಮಾಹಿತಿ ನವೀಕರಣ ಸೇವೆ ಪಡೆಯುವುದು ಅತ್ಯಂತ ಸುಲಭವಾಗಲಿದೆ.

ರಾಷ್ಟ್ರದ ಜನತೆಗೆ ನಾಗರೀಕ ಸೇವೆಗಳನ್ನು ಸುಲಭ ಮತ್ತು ಸರಳವಾಗಿ ಒದಗಿಸುವ ನಿಟ್ಟಿನಲ್ಲಿ ದೃಢ ಸಂಕಲ್ಪ, ಸ್ಪಷ್ಟ ದೂರದೃಷ್ಟಿ ಹೊಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ. ಹಾಗೆಯೇ, ಈ ಪ್ರಮುಖ ಉಪಕ್ರಮವನ್ನು ಸಾಕಾರಗೊಳಿಸುವಲ್ಲಿ ತ್ವರಿತ ಬೆಂಬಲ ಮತ್ತು ಸಕಾರಾತ್ಮಕ ಸ್ಪಂದನೆ ನೀಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೂ ನಾನು ಮನಃಪೂರ್ವಕವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ಡಿಜಿಟಲ್ ಇಂಡಿಯಾ’ವನ್ನು ಬಲಪಡಿಸುವ ಹಾಗೂ ತಳಮಟ್ಟದಲ್ಲಿ ಸಮರ್ಥ, ಸುಲಭವಾಗಿ ಲಭ್ಯವಿರುವ ಮತ್ತು ತಂತ್ರಜ್ಞಾನ ಆಧರಿತ ಸಾರ್ವಜನಿಕ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಇದು ಮತ್ತೊಂದು ಮಹತ್ವದ ಹೆಜ್ಜೆ. ಮಂಡ್ಯ ಜಿಲ್ಲೆಗೆ ಆಧಾರ್ ಸೇವಾ ಕೇಂದ್ರ ವರದಾನವಾಗಲಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular