HomeLatest Newsಕರ್ನಾಟಕ ರಾಜ್ಯದ ಹಿತಾಸಕ್ತಿ ಗಾಗಿ ಪಕ್ಷಾತೀತ ಒಗ್ಗಟ್ಟು: ಡಿ.ಕೆ. ಶಿವಕುಮಾರ್ ಸಭೆ ಐತಿಹಾಸಿಕ ಯಶಸ್ಸು

ಕರ್ನಾಟಕ ರಾಜ್ಯದ ಹಿತಾಸಕ್ತಿ ಗಾಗಿ ಪಕ್ಷಾತೀತ ಒಗ್ಗಟ್ಟು: ಡಿ.ಕೆ. ಶಿವಕುಮಾರ್ ಸಭೆ ಐತಿಹಾಸಿಕ ಯಶಸ್ಸು

ಸಭೆಯ ಹಿನ್ನೆಲೆ ಮತ್ತು ಉದ್ದೇಶ

ಬೆಂಗಳೂರು- ರಾಜ್ಯದ ಹಿತಾಸಕ್ತಿ ಹಾಗೂ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಭೇದಗಳನ್ನು ಮರೆತು ಒಂದಾಗುವ ಸಂದೇಶ ಸಾರುವ ನಿಟ್ಟಿನಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಕರೆದಿದ್ದ ಕರ್ನಾಟಕದ ಉಭಯ ಸದನಗಳ ಸಂಸದರ ಸಭೆಯು ಅಭೂತಪೂರ್ವ ಯಶಸ್ಸು ಕಂಡಿದೆ.

ಕೇಂದ್ರ ಸರ್ಕಾರದ ಮುಂದೆ ರಾಜ್ಯದ ಬಾಕಿ ಇರುವ ಯೋಜನೆಗಳು, ಅನುದಾನ ಬಿಡುಗಡೆ ಹಾಗೂ ಬರ ಪರಿಸ್ಥಿತಿ ನಿರ್ವಹಣೆಯ ನೆರವಿನ ಕುರಿತು ಚರ್ಚಿಸಲು ಮತ್ತು ಕೇಂದ್ರದ ಮೇಲೆ ಒಮ್ಮತದ ಒತ್ತಡ ಹೇರುವ ಉದ್ದೇಶದಿಂದ ಈ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯು ನಿರೀಕ್ಷೆಗೂ ಮೀರಿದ ಯಶಸ್ಸು ಕಂಡಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳೆಂಬ ಬೇಧವಿಲ್ಲದೆ ಎಲ್ಲಾ ಸಂಸದರು ಸಭೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವುದು ವಿಶೇಷವಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿಪಕ್ಷದ ಮೆಚ್ಚುಗೆ ಮತ್ತು ಐತಿಹಾಸಿಕ ಒಗ್ಗಟ್ಟು

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ, ಹಾಗೆಯೇ ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಹಾಗೂ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಸೇರಿದಂತೆ ಹಲವು ಮುಖಂಡರು ಸಭೆಯನ್ನು ಮುಕ್ತ ಕಂಠದಿಂದ ಕೊಂಡಾಡಿದರು.

ರಾಜ್ಯದ ಇತಿಹಾಸದಲ್ಲೇ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ಸಂಸದರು ಒಂದೇ ವೇದಿಕೆಯಲ್ಲಿ ಸೇರಿರುವುದು ಇದೇ ಮೊದಲು ಎಂದು ಹಿರಿಯ ಮುಖಂಡರು ಅಭಿಪ್ರಾಯಪಟ್ಟರು.

ಸಭೆಯ ಧ್ಯೇಯೋದ್ದೇಶ ಮತ್ತು ಸರ್ವರನ್ನೂ ಒಳಗೊಳ್ಳುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡೆ ಹಾಗೂ ಅಚ್ಚುಕಟ್ಟಾದ ಸಭೆಯ ಆಯೋಜನೆಯನ್ನು ಪ್ರತಿಪಕ್ಷದ ಮುಖಂಡರು ಶ್ಲಾಘಿಸಿದರು.

“ಕರ್ನಾಟಕದ ಅಭಿವೃದ್ಧಿ ವಿಚಾರ ಬಂದಾಗ ಪಕ್ಷಬೇಧ ಮರೆತು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು” ಎಂಬ ಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತಿಗೆ ಸಭೆಯಲ್ಲಿದ್ದ ಎಲ್ಲಾ ಸಂಸದರು ಧ್ವನಿಗೂಡಿಸಿ, ಒಗ್ಗಟ್ಟಿನಿಂದ ಹೋರಾಡುವುದಾಗಿ ಭರವಸೆ ನೀಡಿದರು.

ಭಾಗವಹಿಸಿದ ಪ್ರಮುಖರು

ಸಭೆಯಲ್ಲಿ ಭಾಗವಹಿಸಿದ ಗಣ್ಯರು

ಸಭೆಯಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ ಹಾಗೂ ಲೋಕಸಭೆ ಮತ್ತು ರಾಜ್ಯಸಭೆಯ ಪ್ರಮುಖ ಸಂಸದರಾದ ಬಸವರಾಜ್ ಬೊಮ್ಮಾಯಿ, ಜಗದೀಶ್ ಶೆಟ್ಟರ್, ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್, ಗೋವಿಂದ ಕಾರಜೋಳ, ಡಾ. ಸುಧಾಕರ್, ಬ್ರಿಜೇಶ್ ಚೌಟ, ಯದುವೀರ್ ಒಡೆಯರ್, ಡಾ. ಸುಧಾ ಮೂರ್ತಿ, ಜೈರಾಮ್ ರಮೇಶ್, ಸೈಯದ್ ನಾಸಿರ್ ಹುಸೇನ್ ಸೇರಿದಂತೆ ಸುಮಾರು ಮೂವತ್ತಕ್ಕೂ ಅಧಿಕ ಸಂಸದರು ಹಾಜರಿದ್ದು ಸಭೆಗೆ ಶಕ್ತಿ ತುಂಬಿದರು.

ಇನ್ನು ಕೇಂದ್ರ ಸಚಿವರಾದ ನಿರ್ಮಲ ಸೀತಾರಾಮನ್, ಎಚ್.ಡಿ. ಕುಮಾರಸ್ವಾಮಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕೆಲವು ಸಂಸದರು ಅನ್ಯ ಕಾರ್ಯಗಳ ನಿಮಿತ್ತ ಸಭೆಗೆ ಹಾಜರಾಗಲು ಸಾಧ್ಯವಾಗದಿದ್ದರೂ, ಮುಂಚಿತವಾಗಿ ತಮ್ಮ ಅನುಪಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದರು.

ರಾಜ್ಯದ ಪ್ರಮುಖ ಬೇಡಿಕೆಗಳು ಹಾಗೂ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದ ಮೇಲೆ ಸಂಸದರೆಲ್ಲರೂ ಒಟ್ಟಾಗಿ ಧ್ವನಿ ಎತ್ತುವ ಮೂಲಕ ಸಭೆ ಭರ್ಜರಿ ಯಶಸ್ಸು ಕಂಡಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular