HomeLatest Newsಭೀಕರ ಅಪಘಾತ: ಕಂದಕಕ್ಕೆ ಉರುಳಿದ ಅಮರನಾಥ ಯಾತ್ರಿಕರಿದ್ದ ಬಸ್: 39 ಜನರಿಗೆ ಗಂಭೀರ ಗಾಯ

ಭೀಕರ ಅಪಘಾತ: ಕಂದಕಕ್ಕೆ ಉರುಳಿದ ಅಮರನಾಥ ಯಾತ್ರಿಕರಿದ್ದ ಬಸ್: 39 ಜನರಿಗೆ ಗಂಭೀರ ಗಾಯ

ಶ್ರೀನಗರ : ಪವಿತ್ರ ಅಮರನಾಥ ಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಯಾತ್ರಿಕರ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 39 ಯಾತ್ರಿಕರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ಗಂಡೇರ್‌ಬಾಲ್ ಜಿಲ್ಲೆಯ ಕಂಗನ್ ಪ್ರದೇಶದ ಹರಿಗನ್ವಾನ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 39 ಯಾತ್ರಿಕರು ಗಾಯಗೊಂಡಿದ್ದಾರೆ. ಅಮರನಾಥ ಗುಹಾ ದೇವಾಲಯದಲ್ಲಿ ಬಾಬಾ ಬರ್ಫಾನಿ ದರ್ಶನ ಪಡೆದು ಹಿಂತಿರುಗುತ್ತಿದ್ದ ಯಾತ್ರಿಕರಿದ್ದ ಬಸ್, ಹರಿಗನ್ವಾನ್ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಖಾಲಿ ಮನೆಗೆ ಡಿಕ್ಕಿ ಹೊಡೆದಿದೆ.

ಅದೃಷ್ಟವಶಾತ್ ಬಸ್ ಹತ್ತಿರದಲ್ಲೇ ಹರಿಯುತ್ತಿದ್ದ ಸಿಂಧ್ ನದಿಗೆ ಬೀಳುವುದರಿಂದ ಕೂದಲೆಳೆಯ ಅಂತರದಲ್ಲಿ ತಪ್ಪಿದ್ದು, ದುರಂತವೊಂದು ತಪ್ಪಿದಂತಾಗಿದೆ. ಅಪಘಾತದ ಸಮಯದಲ್ಲಿ ಮನೆಯೊಳಗೆ ಯಾರೂ ಇಲ್ಲದ ಕಾರಣ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ತಿಳಿದ ತಕ್ಷಣವೇ ಸ್ಥಳೀಯ ನಿವಾಸಿಗಳು, ಜಮ್ಮು-ಕಾಶ್ಮೀರ ಪೊಲೀಸರು, ಐಟಿಬಿಪಿ , ಸಿಆರ್‌ಪಿಎಫ್ ಹಾಗೂ ಭಾರತೀಯ ಸೇನೆಯ ಪಡೆಗಳು ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳು ಹಾಗೂ ‘ಸ್ಕಿಮ್ಸ್’ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಯಾತ್ರಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಮನೋಜ್ ಸಿನ್ಹಾ ಅವರು ಗಂಡೇರ್‌ಬಾಲ್ ಜಿಲ್ಲಾಧಿಕಾರಿ ಮತ್ತು ಆರೋಗ್ಯ ಅಧಿಕಾರಿಗಳೊಂದಿಗೆ ಮಾತನಾಡಿ ಗಾಯಾಳುಗಳ ಸ್ಥಿತಿಗತಿಯನ್ನು ವಿಚಾರಿಸಿದ್ದಾರೆ. ಗಾಯಗೊಂಡ ಯಾತ್ರಿಕರಿಗೆ ಅಗತ್ಯವಿರುವ ಎಲ್ಲಾ ಸಹಾಯ ಮತ್ತು ಅತ್ಯುತ್ತಮ ವೈದ್ಯಕೀಯ ಆರೈಕೆಯನ್ನು ಖಚಿತಪಡಿಸಲು ಸೂಚಿಸಿದ್ದೇನೆ. ಗಾಯಗೊಂಡ ಭಕ್ತರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶಿವನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿನ್ಹಾ ತಿಳಿಸಿದ್ದಾರೆ.

ಜುಲೈ 2 ರಂದು ಪ್ರಾರಂಭವಾದ ಈ ವರ್ಷದ ವಾರ್ಷಿಕ ಅಮರನಾಥ ಯಾತ್ರೆಯಲ್ಲಿ ಇದುವರೆಗೆ 4.15 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಪವಿತ್ರ ಹಿಮಲಿಂಗದ ದರ್ಶನ ಪಡೆದಿದ್ದಾರೆ. 57 ದಿನಗಳ ಕಾಲ ನಡೆಯುವ ಅಮರನಾಥ ತೀರ್ಥಯಾತ್ರೆಯು ಆಗಸ್ಟ್ 28 ರಂದು ಮುಕ್ತಾಯಗೊಳ್ಳಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular