ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗ (KPSC)ಯಲ್ಲಿ ಪಶುವೈದ್ಯಾಧಿಕಾರಿ ಹುದ್ದೆಗಾಗಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಎಫ್ಐಆರ್ಗಳು ದಾಖಲಾಗಿವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಮೀಷ್ನರ್ ಸೀಮಂತ್ ಕುಮಾರ್ ಸಿಂಗ್, ಕೆಪಿಎಸ್ಸಿಯಲ್ಲಿ ಹುದ್ದೆಗಾಗಿ ನಡೆದಿದೆ ಎನ್ನಲಾದ ಡೀಲಿಂಗ್ ಪ್ರಕರಣ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ 3 ಎಫ್ಐಆರ್ ದಾಖಲಾಗಿದೆ. ಈ ಪೈಕಿ 2 ಎಫ್ಐಆರ್ಗಳನ್ನ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ಒಂದು ಕೇಸ್ಗೆ ಕೋರ್ಟ್ನಲ್ಲಿ ಅನುಮತಿ ಕೇಳಲಾಗಿದೆ. ಸದ್ಯ 2 ಕೇಸ್ಗಳನ್ನ ಸಿಐಡಿಗೆ ವರ್ಗಾವಣೆ ಮಾಡಿ ಡಿಜಿ ಅಂಡ್ ಐಜಿಪಿ ಆದೇಶ ಮಾಡಿದ್ದಾರೆ ಎಂದರು.
ಕೆಪಿಎಸ್ಸಿಯಲ್ಲಿ 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ 80 ಲಕ್ಷ ರೂ. ವೆರಗೆ ಲಂಚ ಪಡೆದಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಪ್ರಕರಣವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಹಾಗೂ ಕೆಪಿಎಸ್ಸಿ ವಿರುದ್ಧ ವಿದ್ಯಾರ್ಥಿಗಳು ಹಾಗೂ ಪಶುವೈದ್ಯಾಧಿಕಾರಿಗಳು ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ಕೂಡ ಬೆಂಬಲ ನೀಡಿದೆ.

