HomeLatest NewsBIG NEWS : ದೇಶದಲ್ಲೇ ಮೊದಲ ಬಾರಿಗೆ : ಹೀರಾ ಗೋಲ್ಡ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಮಹತ್ವದ...

BIG NEWS : ದೇಶದಲ್ಲೇ ಮೊದಲ ಬಾರಿಗೆ : ಹೀರಾ ಗೋಲ್ಡ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು..!

ಆರ್ಥಿಕ ವಂಚನೆ ನಡೆಸುವ ಕಂಪನಿಗಳಿಗೆ ಎಚ್ಚರಿಕೆ ನೀಡುವ ರೀತಿಯಲ್ಲಿ ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ. 2009ರಲ್ಲಿ ಸ್ಥಾಪನೆಯಾದ ‘ಹೀರಾ ಗೋಲ್ಡ್’ ಕಂಪನಿ ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಜನರನ್ನು ಆಕರ್ಷಿಸಿ ಹೂಡಿಕೆ ರೂಪದಲ್ಲಿ ಹಣ ಸಂಗ್ರಹಿಸಿತ್ತು.

ಈ ಕಂಪನಿಯ ನಿರ್ದೇಶಕಿ ಶೇಕ್ ನೌಹೀರಾ (ಮಹಿಳೆ) ಕಡಿಮೆ ಹೂಡಿಕೆಗೆ ಹೆಚ್ಚು ಲಾಭದ ಭರವಸೆ ನೀಡಿ ಸಾಮಾನ್ಯ ಜನರಿಂದ ಸಾವಿರಾರು ಕೋಟಿ ರೂಪಾಯಿ ಠೇವಣಿ ಸಂಗ್ರಹಿಸಿದ್ದರು. ಶೇ.36ರಷ್ಟು ಬಡ್ಡಿ ನೀಡುವ ಆಮಿಷವೊಡ್ಡಿದ್ದರಿಂದ ಹೆಚ್ಚಿನ ಸಂಖ್ಯೆಯ ಜನರು ಹೀರಾ ಗೋಲ್ಡ್‌ನಲ್ಲಿ ಹಣ ಹೂಡಿಕೆ ಮಾಡಿದ್ದರು. ಈ ಪ್ರಕರಣದಲ್ಲಿ ಕಂಪನಿಯು ಸುಮಾರು ₹3 ಸಾವಿರ ಕೋಟಿಯಿಂದ ₹5 ಸಾವಿರ ಕೋಟಿವರೆಗೆ ಜನರಿಂದ ಸಂಗ್ರಹಿಸಿರುವುದು ಪತ್ತೆಯಾಗಿತ್ತು. ಹಣ ಅಕ್ರಮ ವರ್ಗಾವಣೆ (ಮನಿ ಲಾಂಡರಿಂಗ್) ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ED) ತನಿಖೆ ಆರಂಭಿಸಿತ್ತು. ಮನಿ ಲಾಂಡರಿಂಗ್ ಸೇರಿದಂತೆ ಹಲವು ಆರ್ಥಿಕ ಅಪರಾಧಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ನೌಹೀರಾ ಅವರನ್ನು ಹಲವು ಬಾರಿ ಬಂಧಿಸಲಾಗಿತ್ತು. ಆದರೆ ಪ್ರತಿ ಬಾರಿ ಅವರು ಯಾವುದೋ ಒಂದು ರೀತಿಯಲ್ಲಿ ಜಾಮೀನು ಪಡೆದು ಹೊರಬರುತ್ತಿದ್ದರು. ಈ ವರ್ಷದ ಮೇ ತಿಂಗಳಲ್ಲಿಯೂ ಅವರನ್ನು ಮತ್ತೆ ಬಂಧಿಸಲಾಗಿತ್ತು.

ಒಂದೇ ಪ್ರಕರಣವಾಗಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಹೀರಾ ಗೋಲ್ಡ್ ಪ್ರಕರಣ ಹಲವು ರಾಜ್ಯಗಳಿಗೆ ಸಂಬಂಧಿಸಿದ್ದರಿಂದ ಪ್ರತ್ಯೇಕವಾಗಿ ವಿಚಾರಣೆ ನಡೆಯುತ್ತಿತ್ತು. ಬಳಿಕ ಸುಪ್ರೀಂಕೋರ್ಟ್‌ ಎಲ್ಲಾ ಪ್ರಕರಣಗಳನ್ನು ಒಟ್ಟುಗೂಡಿಸಿ ಒಂದೇ ಪ್ರಕರಣವಾಗಿ ವಿಚಾರಣೆ ನಡೆಸಿತು. ಈ ಹಿಂದೆ ಸುಪ್ರೀಂಕೋರ್ಟ್‌ ಹೀರಾ ಗೋಲ್ಡ್‌ನ ಆಸ್ತಿಗಳನ್ನು ವಶಪಡಿಸಿಕೊಳ್ಳುವಂತೆ ಜಾರಿ ನಿರ್ದೇಶನಾಲಯಕ್ಕೆ ಆದೇಶಿಸಿತ್ತು. ಅದರಂತೆ ಅಧಿಕಾರಿಗಳು ದೇಶದ ವಿವಿಧೆಡೆ ಇರುವ 45ಕ್ಕೂ ಹೆಚ್ಚು ಸ್ಥಳಗಳಲ್ಲಿನ ಹೀರಾ ಗೋಲ್ಡ್‌ನ ಸ್ಥಿರ ಮತ್ತು ಚರ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರು.ನಂತರ ಆ ಆಸ್ತಿಗಳನ್ನು ಹರಾಜು ಮಾಡಿ ಬಂದ ಹಣವನ್ನು ಸಂತ್ರಸ್ತರಿಗೆ ಹಂಚುವಂತೆ ಸುಪ್ರೀಂಕೋರ್ಟ್‌ ಸೂಚಿಸಿತ್ತು. ಆದರೆ ಹರಾಜಿನಲ್ಲಿ ಖರೀದಿಸಿದ ಆಸ್ತಿಗಳ ನೋಂದಣಿ ಪ್ರಕ್ರಿಯೆಯಲ್ಲಿ ಸಮಸ್ಯೆ ಎದುರಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಪ್ರೀಂಕೋರ್ಟ್‌ನ ಐತಿಹಾಸಿಕ ಆದೇಶ

ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ ದೇಶದಲ್ಲೇ ಮೊದಲ ಬಾರಿಗೆ ವಿಶೇಷ ಆದೇಶ ನೀಡಿದೆ. ಹೀರಾ ಗೋಲ್ಡ್ ಹೆಸರಿನ ಆಸ್ತಿಗಳನ್ನು ಹರಾಜಿನಲ್ಲಿ ಖರೀದಿಸಿದವರಿಗೆ, ಕಂಪನಿ ನಿರ್ದೇಶಕಿ ನೌಹೀರಾ ಅವರ ಬದಲಾಗಿ ತೆಲಂಗಾಣ ಹೈಕೋರ್ಟ್‌ನ ಪ್ರೋಟೋಕಾಲ್ ರಿಜಿಸ್ಟ್ರಾರ್ ವೆಂಕಟೇಶ್ವರರಾವ್ ಅವರು ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದೆ.

ಅಂದರೆ, ಆಸ್ತಿ ನೋಂದಣಿ ವೇಳೆ ನೌಹೀರಾ ಅವರ ಪರವಾಗಿ ವೆಂಕಟೇಶ್ವರರಾವ್ ಅವರು ಸಹಿ ಮಾಡಲಿದ್ದಾರೆ. ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಈ ಪ್ರಕ್ರಿಯೆ ನಡೆಯಲಿದ್ದು, ಇಂತಹ ಆದೇಶ ದೇಶದಲ್ಲಿ ಇದೇ ಮೊದಲ ಬಾರಿಗೆ ನೀಡಲಾಗಿದೆ ಎಂದು ವಕೀಲರು ತಿಳಿಸಿದ್ದಾರೆ. ಈ ಆದೇಶದಿಂದ ಹೀರಾ ಗೋಲ್ಡ್ ಸಂತ್ರಸ್ತರಿಗೆ ನ್ಯಾಯ ಸಿಗುವ ನಿರೀಕ್ಷೆ ಮೂಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular