HomeLive NewsCWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ:...

CWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದು, ಈ ಸಂಕಷ್ಟದ ನಡುವೆಯೂ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ಸ್ ನೀರು ಹರಿಸಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಸಿಡಬ್ಲ್ಯೂಆರ್ ಸಿ ನೀಡಿರುವ ಶಿಫಾರಸ್ಸನ್ನು ಪ್ರಶ್ನೆಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕ್ಕೆ ಮೇಲನವಿ ಸಲ್ಲಿಸಲಾಗುವುದು. ಈ ಸಂಬಂಧ ಕಾನೂನು ತಜ್ಞರ ಜೊತೆ ಚರ್ಚಿಸುತ್ತೇವೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ತಜ್ಞರು ಹಾಗೂ ಜಲಸಂಪನೂಲ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಲಿದ್ದೇವೆ. ತಕ್ಷಣವೇ ಸಿಡಬ್ಲ್ಯೂಎಂಎಗೆ ಮೇಲನವಿ ಸಲ್ಲಿಸಲಾಗುತ್ತದೆ.ಸಿಡಬ್ಲ್ಯೂಆರ್ ಸಿ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಪ್ರಶ್ನೆ ಮಾಡಬಹುದು. ನಮಗೆ ಕುಡಿಯಲು ನೀರಿಲ್ಲ. ಇಂತ ಸಂಕಷ್ಟದ ಸಂದರ್ಭದಲ್ಲಿ ನೀರು ಹರಿಸುವುದಾದರೂ ಹೇಗೆ? ಎಂದು ಪ್ರಶ್ನೆ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ಮೇಲನವಿ ಸಲ್ಲಿಸುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಕರ್ನಾಟಕದ ಹಿತ ಕಾಪಾಡಲು ಸರ್ಕಾರ ಬದ್ಧ. ಕಾನೂನು ಹೋರಾಟ ಮೂಲಕವೇ ರೈತರ ಹಿತ ಕಾಪಾಡುತ್ತೇವೆ ಎಂದು ರಾಮಲಿಂಗಾರೆಡ್ಡಿ ಭರವಸೆ ನೀಡಿದರು.

ಮೇಕೆದಾಟು ಯೋಜನೆಗೆ ಚಾಲನೆ:
ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ. ಮೇಕೆದಾಟು ಯೋಜನೆ ಬಗ್ಗೆ ಸ್ಪಷ್ಟತೆ ಇದೆ. ಕೇಂದ್ರ ಸರ್ಕಾರದಿಂದ ಶೀಘ್ರದಲ್ಲೇ ಅನುಮತಿ ಸಿಗುವ ಸಾಧ್ಯತೆ ಇದೆ.ಯೋಜನೆ ಕುರಿತು ತಮಿಳುನಾಡಿನ ಆಕ್ಷೇಪಣೆಗಳನ್ನು ಸುಪ್ರೀಂಂಕೋರ್ಟ್ ಪರಿಗಣಿಸಿಲ್ಲ. ಯೋಜನೆ ಆರಂಭಿಸಲು ಯಾವುದೇ ಸಮಸ್ಯೆಗಳಿಲ್ಲ. ವಿಸ್ತೃತ ಯೋಜನಾ ವರದಿಯಲ್ಲಿ ಸ್ವಲ್ಪ ಬದಲಾವಣೆ ಮಾಡಿ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ನಿನ್ನೆ ರಾಜ್ಯಸಭೆಯಲ್ಲಿ ಅನ್ಬುಮಣಿ ರಾಮದಾಸ್ ಕೇಳಿರುವ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಸರ್ಕಾರ ಅಣೆಕಟ್ಟು ನಿರ್ಮಾಣಕ್ಕೆ ನೆರೆಯ ರಾಜ್ಯದ ಅನುಮತಿ ಕೇಳುವ ಅಗತ್ಯ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಈ ನಡುವೆ ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಜೋಸೆಫ್ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಆಗಸ್ಟ್ 3 ರಂದು ಭೇಟಿ ಮಾಡಿ ಚರ್ಚೆ ಮಾಡಲಿದ್ದಾರೆ. ಅಂದು ಯಾವ ನಿರ್ಧಾರಗಳಾಗುತ್ತವೆ ಎಂದು ಕಾದು ನೋಡುತ್ತಿದ್ದೇವೆ ಎಂದು ಹೇಳಿದರು.

ಮೇಕೆದಾಟು ಯೋಜನೆಗೆ ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯವಾಗಿ ಮಂಡ್ಯ ಬಳಿ ಭೂಮಿ ನೀಡಲು ಪರಿಶೀಲನೆ ನಡೆಯುತ್ತಿದೆ. ಸಚಿವ ಸಂಪುಟದಲ್ಲಿ ಈ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು.

ಮಹಾದಾಯಿ ನದಿಗೆ ಅಡ್ಡಲಾಗಿ ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ನಿರಾಕ್ಷೆ?ಪಣಾ ಪತ್ರ ಅಗತ್ಯ ಇದೆ. ಗೋವಾದ ಅರೆ ನ್ಯಾಯಿಕ ಅಧಿಕಾರಿ ನೋಟೀಸ್? ನೀಡಿದ್ದರು ಎಂದು ನಮ ಸರ್ಕಾರ ಕೋರ್ಟ್ ಮೆಟ್ಟಿಲೇರಿತ್ತು. ಇದು ಇತ್ಯರ್ಥಗೊಂಡ ಬಳಿಕ ಬಹುತೇಕ ಯೋಜನೆ ಆರಂಭವಾಗಲಿದೆ ಎಂದರು.

ಕೃಷ್ಣಾ ನದಿ ನೀರಿನ ಹಂಚಿಕೆ ವಿಚಾರವಾಗಿ ನ್ಯಾಯಾಧಿಕರಣದ ತೀರ್ಪು ಬಂದು 13 ವರ್ಷವಾಗಿದೆ. ಈ ಕುರಿತು ಶೀಘ್ರ ಅಧಿಸೂಚನೆ ಹೊರಡಿಸುವಂತೆ ಕರ್ನಾಟಕ ನ್ಯಾಯಾಲಯದ ಮೆಟ್ಟಿಲೇರಿದೆ. ಸುಪ್ರಿಂ ಕೋರ್ಟ್ ಮೂರು ನ್ಯಾಯಾಧೀಶರ ಪೀಠ ರಚಿಸಿ, ಸೆಪ್ಟಂಬರ್ ನಿಂದ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ. ಈ ವರ್ಷದ ಅಂತ್ಯಕ್ಕೆ ಪ್ರಕರಣ ಇತ್ಯರ್ಥವಾಗಬಹುದು. ಅನಂತರ 130 ಟಿಎಂಸಿ ನೀರು ಬಳಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.

ಈಗಾಗಲೇ 9 ಯೋಜನೆಗಳನ್ನು ಆ ಭಾಗದಲ್ಲಿ ಕೈಗೆತ್ತಿಕೊಂಡಿದ್ದೇವೆ. ಜೊತೆಗೆ ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಯೋಜನೆಗೆ ಭೂ ಸ್ವಾಧೀನಕ್ಕೆ ಪರಿಹಾರ ಪಾವತಿಸಲಾಗುತ್ತಿದೆ ಎಂದರು.

ಭದ್ರಾ ಮೇಲ್ದಂಡೆ, ಎತ್ತಿನ ಹೊಳೆ ಯೋಜನೆ ಕಾಮಗಾರಿಗಳು ತ್ವರಿತಗತಿಯಲ್ಲಿ ನಡೆಯುತ್ತಿವೆ. ಎರಡು ಯೋಜನೆಗಳು 2028ಕ್ಕೆ ಮುಗಿಯಲಿದೆ. ಇದಕ್ಕೆ ಅಡ್ಡಿಯಾಗಿರುವ ಎಲ್ಲಾ ಅಡೆತಡೆಗಳನ್ನು ನಿವಾರಿಸಲಾಗಿದೆ.

ಭದ್ರಾ ಮೇಲ್ದದಂಡೆ ಯೋಜನೆಗೆ ಐದು ಸಾವಿರ ಕೋಟಿ ರೂಪಾಯಿ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿತ್ತು. ಇದನ್ನು ಕೇಂದ್ರ ಜಲಶಕ್ತಿ ಯೋಜನೆ ಸಚಿವರಿಗೆ ನೆನಪಿಸಿದ್ದೇವೆ. ಒಂದೇ ಕಂತಿನಲ್ಲಾಗದಿದ್ದರೂ ಎರಡು ಮೂರು ಕಂತಿನಲ್ಲಿ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇವೆ ಎಂದು ಹೇಳಿದರು.

ನಿನ್ನೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಂಸದರು ಹಾಗೂ ಕೇಂದ್ರ ಸಚಿವರಿಗೆ ರಾಜ್ಯದಿಂದ ಸಲ್ಲಿಕೆಯಾಗಿರುವ 60 ಪ್ರಸ್ತಾವನೆಗಳ ಕುರಿತು ಮಾಹಿತಿ ನೀಡಲಾಗಿದೆ. ಸಂಸತ್‍ನಲ್ಲಿ ಚರ್ಚೆ ನಡೆಯುವ ವೇಳೆಯಲ್ಲಿ ಪ್ರಸ್ತಾಪಿಸಲು ಇದು ಅನುಕೂಲವಾಗಲಿದೆ. ಎಲ್ಲರೂ ಪಕ್ಷ ಬೇಧ ಮರೆತು ರಾಜ್ಯದ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular