HomeLatest Newsಮತ್ತೊಂದು ಕ್ರಾಂತಿಗೆ ಸಜ್ಜಾದ ಸಿಜೆಪಿ: ರೈತರು, ವಿದ್ಯಾರ್ಥಿಗಳು ಮತ್ತು ಯುವಜನರ ಒಕ್ಕೂಟದ ಮೂಲಕ ಕೇಂದ್ರ ವಿರುದ್ಧ...

ಮತ್ತೊಂದು ಕ್ರಾಂತಿಗೆ ಸಜ್ಜಾದ ಸಿಜೆಪಿ: ರೈತರು, ವಿದ್ಯಾರ್ಥಿಗಳು ಮತ್ತು ಯುವಜನರ ಒಕ್ಕೂಟದ ಮೂಲಕ ಕೇಂದ್ರ ವಿರುದ್ಧ ಹೋರಾಟಕ್ಕೆ ಸಿದ್ಧತೆ

ನವದೆಹಲಿ-ದೇಶದಲ್ಲಿ ರೈತರು, ವಿದ್ಯಾರ್ಥಿಗಳು ಮತ್ತು ಯುವಜನರನ್ನು ಒಂದೇ ವೇದಿಕೆಯಡಿ ತರುವ ಉದ್ದೇಶದಿಂದ ಜಿರಳೆ ಜನತಾ ಪಕ್ಷದ (ಸಿಜೆಪಿ) ನಾಯಕರು ದೆಹಲಿಯಲ್ಲಿ ಪ್ರಮುಖ ರೈತ ನಾಯಕ ರಾಕೇಶ್ ಟಿಕಾಯತ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.

ಒಕ್ಕೂಟ ರಚನೆಯ ಉದ್ದೇಶ

ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ವಂಚನೆ ಹಾಗೂ ರೈತರ ವಿವಿಧ ಸಮಸ್ಯೆಗಳನ್ನು ಮುನ್ನೆಲೆಗೆ ತಂದು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಎಲ್ಲಾ ಕಡೆಯಿಂದ ಸುತ್ತುವರಿಯಲು ಬಲವಾದ ಒಕ್ಕೂಟವನ್ನು ರಚಿಸುವ ಆಶಯವನ್ನು ಸಿಜೆಪಿ ವ್ಯಕ್ತಪಡಿಸಿದೆ.

ರೈತರು, ವಿದ್ಯಾರ್ಥಿಗಳು ಮತ್ತು ಯುವಜನರ ಸಮಸ್ಯೆಗಳನ್ನು ಒಟ್ಟಾಗಿ ಧ್ವನಿಸಲು ಮತ್ತು ಭವಿಷ್ಯದ ಕಾರ್ಯತಂತ್ರ ರೂಪಿಸಲು ಸಿಜೆಪಿ ವಕ್ತಾರ ಅಶುತೋಷ್ ರಾಂಕಾ ಹಾಗೂ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಮಾತುಕತೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಳ್ಳು ಎಫ್‌ಐಆರ್ ಹಿಂಪಡೆಯಲು ಒತ್ತಾಯ

ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪ್ರತಿಭಟನಾಕಾರರ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳನ್ನು (ಎಫ್‌ಐಆರ್) ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಲಾಗಿದೆ. ಒಂದು ವೇಳೆ ಸರ್ಕಾರ ಕೃತಿಗಿಳಿಯದಿದ್ದರೆ, ರೈತ ಸಂಘಟನೆಗಳ ಸಹಯೋಗದೊಂದಿಗೆ ರಾಷ್ಟ್ರವ್ಯಾಪಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ವಿದ್ಯಾರ್ಥಿ ಪ್ರತಿಭಟನೆಯ ಸಂದರ್ಭದಲ್ಲಿ ಕೇಂದ್ರ ಮತ್ತು ಕೆಲವು ರಾಜ್ಯ ಸರ್ಕಾರಗಳು ನೀಡಿದ್ದ ಭರವಸೆಗಳನ್ನು ಪೂರ್ಣ ಪ್ರಮಾಣದಲ್ಲಿ ಈೇರಿಸಿಲ್ಲ ಎಂದು ಸಂಘಟನೆ ಆರೋಪಿಸಿದೆ. ಬಿಹಾರ, ಪಶ್ಚಿಮ ಬಂಗಾಳ ಮತ್ತು ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿದ್ಯಾರ್ಥಿಗಳ ವಿರುದ್ಧ ಇನ್ನೂ ಎಫ್‌ಐಆರ್‌ಗಳನ್ನು ದಾಖಲಿಸುತ್ತಿರುವುದನ್ನು ಖಂಡಿಸಲಾಗಿದೆ.

ರಾಕೇಶ್ ಟಿಕಾಯತ್ ಅವರು ಈ ಹಿಂದೆಯೂ ಜಂತರ್ ಮಂತರ್ ಪ್ರತಿಭಟನೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಬೇಡಿಕೆಗಳಿಗೆ ಬೆಂಬಲ ಸೂಚಿಸಿದ್ದರು. ಈಗ ರೈತ ಸಂಘಟನೆಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ಕೈಜೋಡಿಸುತ್ತಿರುವುದರಿಂದ, ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧದ ರಾಜಕೀಯ ಮತ್ತು ಸಾಮಾಜಿಕ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ.

ನೀಟ್ ಹಗರಣ ಮತ್ತು ಜಂತರ್ ಮಂತರ್ ಪ್ರತಿಭಟನೆ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವಿವಿಧ ಪರೀಕ್ಷಾ ಹಗರಣಗಳ ವಿರುದ್ಧ ಸಿಜೆಪಿ ನೇತೃತ್ವದಲ್ಲಿ 36 ದಿನಗಳ ಕಾಲ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿತ್ತು. ಜುಲೈ 20 ರಂದು ಜಂತರ್ ಮಂತರ್‌ನಲ್ಲಿ ನಡೆದ ಮೆರವಣಿಗೆಯ ವೇಳೆ ಸಂಸತ್ತಿನ ಕಡೆಗೆ ನುಗ್ಗಲು ಯತ್ನಿಸಿದಾಗ ಭದ್ರತಾ ಸಿಬ್ಬಂದಿ ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿತ್ತು. ನಂತರ ಜುಲೈ 25 ರಂದು ಕೆಲವು ಬೇಡಿಕೆಗಳ ಈಡೇರಿಕೆಯೊಂದಿಗೆ ಆಂದೋಲನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular