HomeKarnatakaಎಸ್ಐಆರ್ ಶಾಕ್: ರಾಜ್ಯದ ಮತದಾರರ ಪಟ್ಟಿಯಿಂದ 84.31 ಲಕ್ಷ ಮಂದಿ ಹೊರಕ್ಕೆ

ಎಸ್ಐಆರ್ ಶಾಕ್: ರಾಜ್ಯದ ಮತದಾರರ ಪಟ್ಟಿಯಿಂದ 84.31 ಲಕ್ಷ ಮಂದಿ ಹೊರಕ್ಕೆ

ಬೆಂಗಳೂರು: ರಾಜ್ಯಾದ್ಯಂತ ಪ್ರಸ್ತುತ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆಯಲ್ಲಿ ಸುಮಾರು ಶೇಕಡ 15ರಷ್ಟು 84,31,612 ಮತದಾರರನ್ನು ಮೊದಲ ಕರಡು ಮತದಾರರ ಪಟ್ಟಿಯಿಂದ ಹೊರಗಿಡಲು ಗುರುತಿಸಲಾಗಿದೆ.

ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ವಿ. ಅನ್ಬುಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರತಿಯೊಬ್ಬ ಮತದಾರರ ಸ್ಥಳ ಮಹಜರು ಮಾಡಲಾಗಿದ್ದು, ಮೃತರ ಡೆತ್ ಸರ್ಟಿಫಿಕೇಟ್ ಸಂಗ್ರಹಿಸಿ ಸಂಬಂಧಿಸಿದವರಿಂದ ಸಹಿ ಕೂಡ ಪಡೆಯಲಾಗಿದೆ. ಹೀಗಾಗಿ ಈ 84 ಲಕ್ಷಕ್ಕೂ ಅಧಿಕ ಜನರನ್ನು ಮೊದಲ ಕರಡು ಪಟ್ಟಿಯಲ್ಲಿ ಪರಿಗಣಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಿಬಿಎ ವ್ಯಕ್ತಿಯಲ್ಲಿ ಒಟ್ಟು 1.3 ಕೋಟಿ ಮತದಾರರಿದ್ದಾರೆ. ಆದರೆ ಇದುವರೆಗೆ ಕೇವಲ 47.97 ಲಕ್ಷ ಜನ ಮಾತ್ರ ಅರ್ಜಿ ವಾಪಸ್ ನೀಡಿದ್ದಾರೆ. 39.38 ಲಕ್ಷ ಜನ ಮತದಾರರ ಸುಳಿವೇ ಸಿಕ್ಕಿಲ್ಲ. ಇನ್ನೂ 16.57,ಲಕ್ಷ ಮತದಾರರು ಅರ್ಜಿ ವಾಪಸ್ ನೀಡಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

51,74,968 ಜನ ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ. 14,99,799 ಜನ ಮೃತಪಟ್ಟಿದ್ದಾರೆ. 11,61,231 ಜನ ನಾಪತ್ತೆಯಾಗಿದ್ದಾರೆ. 5.62.572 ಜನ ಎರಡು ಕಡೆ ಮತ/ನಕಲಿ ಹೊಂದಿದ್ದಾರೆ. 33,042 ಮಂದಿ ಸಹಿ ಹಾಕಲು/ಇತರರು ನಿರಾಕರಿಸಿದ್ದಾರೆ.

ರಾಜ್ಯಾದ್ಯಂತ ಒಟ್ಟು 5,54,32,314 ಎನ್ಯೂಮರೇಷನ್ ಫಾರ್ಮ್ ಗಳನ್ನು ವಿತರಿಸಲಾಗಿದೆ. 4,26,75,861 ಅರ್ಜಿಗಳನ್ನು ವಾಪಸ್ ಪಡೆದು ಡಿಜಿಟಲ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular