HomeLatest NewsSHOCKING : ಮನೆ ಮುಂದೆ ಆಟವಾಡುತ್ತಿದ್ದ 3 ವರ್ಷದ ಮಗುವಿನ ಮೇಲೆ ಬೀದಿ ನಾಯಿ ಭೀಕರ...

SHOCKING : ಮನೆ ಮುಂದೆ ಆಟವಾಡುತ್ತಿದ್ದ 3 ವರ್ಷದ ಮಗುವಿನ ಮೇಲೆ ಬೀದಿ ನಾಯಿ ಭೀಕರ ದಾಳಿ ; ಆಘಾತಕಾರಿ ವಿಡಿಯೋ ವೈರಲ್ |WATCH VIDEO

ಮಹಾರಾಷ್ಟ್ರ: ಮನೆಯ ಸಮೀಪ ಆಟವಾಡುತ್ತಿದ್ದ ಮೂರು ವರ್ಷದ ಮಗುವಿನ ಮೇಲೆ ಬೀದಿ ನಾಯಿ ಏಕಾಏಕಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮನೆಯ ಮುಂಭಾಗ ಆಟವಾಡುತ್ತಿದ್ದ ಮೂರು ವರ್ಷದ ಮಗುವಿನ ಮೇಲೆ ಬೀದಿ ನಾಯಿ ಏಕಾಏಕಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಆತಂಕ ಮೂಡಿಸಿದೆ. ಮಗುವಿನ ಕಿರುಚಾಟ ಕೇಳಿ ಸ್ಥಳೀಯರು ಧಾವಿಸಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು, ದಾಳಿಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ದಾಳಿಯ ವೇಳೆ ಮಗುವಿನ ದೇಹದ ಹಲವು ಭಾಗಗಳಿಗೆ ತೀವ್ರ ಗಾಯಗಳಾಗಿವೆ. ಮಗುವಿನ ಕಿರುಚಾಟ ಕೇಳಿ ಸ್ಥಳೀಯರು ತಕ್ಷಣ ಧಾವಿಸಿ, ನಾಯಿಯನ್ನು ಓಡಿಸಿ ಮಗುವನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಗುವಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂಪೂರ್ಣ ಘಟನೆ ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ವಿಡಿಯೋ ನೋಡಿದ ಸಾರ್ವಜನಿಕರು ಆತಂಕ ವ್ಯಕ್ತಪಡಿಸುತ್ತಿದ್ದು, ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಘಟನೆಯ ಬಳಿಕ ಸ್ಥಳೀಯ ನಿವಾಸಿಗಳು, ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಆಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular