HomeLatest NewsBIG NEWS : ಜನನ-ಮರಣ ನೋಂದಣಿ ವಿಳಂಬಕ್ಕೆ ಕಠಿಣ ನಿಯಮ; ಲೋಕಸಭೆಯಲ್ಲಿ ಮಹತ್ವದ ಮಸೂದೆ ಮಂಡನೆ

BIG NEWS : ಜನನ-ಮರಣ ನೋಂದಣಿ ವಿಳಂಬಕ್ಕೆ ಕಠಿಣ ನಿಯಮ; ಲೋಕಸಭೆಯಲ್ಲಿ ಮಹತ್ವದ ಮಸೂದೆ ಮಂಡನೆ

ನವದೆಹಲಿ: ಜನನ ಮತ್ತು ಮರಣ ನೋಂದಣಿಯಲ್ಲಿ ಆಗುತ್ತಿರುವ ವಿಳಂಬವನ್ನು ತಡೆಯಲು ಕೇಂದ್ರ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ನಾಗರಿಕರು ಜನನ ಹಾಗೂ ಮರಣಗಳನ್ನು ಸಮಯಕ್ಕೆ ಸರಿಯಾಗಿ ನೋಂದಾಯಿಸಲು ಪ್ರೋತ್ಸಾಹಿಸುವ ಉದ್ದೇಶದಿಂದ ‘ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ-2026’ ಅನ್ನು ಬುಧವಾರ ಲೋಕಸಭೆಯಲ್ಲಿ ಮಂಡಿಸಲಾಯಿತು.

ಜನನ ಮತ್ತು ಮರಣ ನೋಂದಣಿಯಲ್ಲಿ ಆಗುತ್ತಿರುವ ವಿಳಂಬವನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ‘ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ–2026’ ಅನ್ನು ಲೋಕಸಭೆಯಲ್ಲಿ ಮಂಡಿಸಿದೆ. ಮಸೂದೆಯ ಪ್ರಕಾರ, 1 ರಿಂದ 2 ವರ್ಷಗಳ ವಿಳಂಬವಾದರೆ ಜಿಲ್ಲಾಧಿಕಾರಿ ಅಥವಾ ಸಂಬಂಧಿತ ಮ್ಯಾಜಿಸ್ಟ್ರೇಟ್ ಅನುಮತಿ, 2 ವರ್ಷಕ್ಕಿಂತ ಹೆಚ್ಚು ತಡವಾದರೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅನುಮತಿ ಕಡ್ಡಾಯವಾಗಲಿದೆ.ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ನಿತ್ಯಾನಂದ ರೈ ಅವರು ವಿಪಕ್ಷ ಸದಸ್ಯರ ಪ್ರತಿಭಟನೆಯ ನಡುವೆಯೇ ಈ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದರು.

ಮಸೂದೆಯ ಪ್ರಮುಖ ಅಂಶಗಳು

  • ಜನನ ಅಥವಾ ಮರಣ ನೋಂದಣಿಯಲ್ಲಿ 1 ರಿಂದ 2 ವರ್ಷಗಳ ವಿಳಂಬವಾದರೆ, ಜಿಲ್ಲಾ ಮ್ಯಾಜಿಸ್ಟ್ರೇಟ್ (DM), ಉಪ ವಿಭಾಗಾಧಿಕಾರಿ (SDM) ಅಥವಾ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಅವರ ಅನುಮತಿ ಕಡ್ಡಾಯವಾಗಿರುತ್ತದೆ. ಅವರ ಸಮ್ಮುಖದಲ್ಲೇ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬೇಕು.
  • 2 ವರ್ಷಕ್ಕಿಂತ ಹೆಚ್ಚು ವಿಳಂಬವಾದರೆ, ನ್ಯಾಯಾಂಗ ಮ್ಯಾಜಿಸ್ಟ್ರೇಟ್ (Judicial Magistrate) ಅವರ ಅನುಮತಿ ಪಡೆಯುವುದು ಕಡ್ಡಾಯವಾಗಲಿದೆ.

ಕಾನೂನಿನ ಹಿನ್ನೆಲೆ

1969ರ ಜನನ ಮತ್ತು ಮರಣ ನೋಂದಣಿ ಕಾಯ್ದೆ ಪ್ರಕಾರ ಜನನ ಹಾಗೂ ಮರಣ ನೋಂದಣಿ ಕಡ್ಡಾಯವಾಗಿದೆ. ಈ ಕಾಯ್ದೆಯಡಿ ನೀಡುವ ಪ್ರಮಾಣಪತ್ರಕ್ಕೆ ಕಾನೂನುಬದ್ಧ ಗುರುತಿನ (Legal Identity) ಮಾನ್ಯತೆ ಇದೆ. ಈ ಕಾಯ್ದೆಗೆ 2023ರಲ್ಲಿ ತಿದ್ದುಪಡಿ ಮಾಡಲಾಗಿದ್ದು, ಪರಿಷ್ಕೃತ ನಿಯಮಗಳು ಈ ವರ್ಷದ ಅಕ್ಟೋಬರ್ 1ರಿಂದ ಜಾರಿಗೆ ಬರಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular