HomeKarnatakaBREAKING: ಶಾಲೆಗೆ ಹೋಗುತ್ತಿದ್ದಾಗ ದುರಂತ: ಕಾರು ಹರಿದು 10 ವರ್ಷದ ಬಾಲಕಿ ದುರ್ಮರಣ

BREAKING: ಶಾಲೆಗೆ ಹೋಗುತ್ತಿದ್ದಾಗ ದುರಂತ: ಕಾರು ಹರಿದು 10 ವರ್ಷದ ಬಾಲಕಿ ದುರ್ಮರಣ

ನೆಲಮಂಗಲ: ಶಾಲೆಗೆ ಹೋಗುತ್ತಿದ್ದ ಬಾಲಕಿಯ ಮೇಲೆ ಕಾರು ಹರಿದು 10 ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳುರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.

ನೆಲಮಂಗಲದ ಬೀರವಾರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ದೊಡ್ದಮ್ಮನ ಜೊತೆ ಬಾಲಕಿ ಶಾಲೆಗೆ ಹೋಗುತ್ತಿದ್ದಳು. ಈ ವೇಳೆ ನೆಲಮಂಗಲದಿಂದ ಕುಣಿಗಲ್ ಕಡೆಗೆ ಹೋಗುತ್ತಿದ್ದ ಕಾರು ಬಾಲಕಿಗೆ ಡಿಕ್ಕಿ ಹೊಡೆದಿದ್ದು, ಬಾಲಕಿ ಮೇಲೆಯೇ ಹರಿದು ಹೋಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಬಾಲಕಿ ದೊಡ್ದಮ್ಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular