HomeKarnatakaತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಕನ್ನಡಪರ ಸಂಘಟನೆ ಆಕ್ರೋಶ: ಮಂಡ್ಯದಲ್ಲಿ ವಿಜಯ್ ಅಭಿನಯದ ಜನನಾಯಗನ್ ಸಿನಿಮಾ...

ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಕನ್ನಡಪರ ಸಂಘಟನೆ ಆಕ್ರೋಶ: ಮಂಡ್ಯದಲ್ಲಿ ವಿಜಯ್ ಅಭಿನಯದ ಜನನಾಯಗನ್ ಸಿನಿಮಾ ಪ್ರದರ್ಶನ ತಡೆಗೆ ಯತ್ನ

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳ ಆಕ್ರೋಶ ಭುಗಿಲೆದ್ದಿದೆ.

ತಮಿಳುನಾಡಿಗೆ ಪ್ರತಿ ದಿನ 3500 ಕ್ಯೂಸೆಕ್ ನಂತೆ 15 ದಿನಗಳ ಕಾಲ 4 ಟಿಎಂಸಿ ನೀರು ಹರಿಸುವಂತೆ CWRC ಶಿಫಾರಸು ಮಾಡಿರುವುದನ್ನು ಖಂಡಿಸಿ ಕಾವೇರಿ ಕೊಳ್ಳದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಇಂದು ಕನ್ನಡಪರ ಸಂಘಟನೆಗಳು ಮಂಡ್ಯದಲ್ಲಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಗರದ ಗುರುಶ್ರೀ ಚಿತ್ರಮಂದಿರದಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ನಟಿಸಿರುವ ‘ಜನನಾಯಗನ್’ ಸಿನಿಮಾ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿ, ಚಿತ್ರಮಂದಿರಕ್ಕೆ ಮುತ್ತಿಗೆ ಹಾಕಲು ಸಂಘಟನೆಗಳ ಕಾರ್ಯಕರ್ತರು ಯತ್ನಿಸಿದರು.

ಕಾವೇರಿ ವಿಚಾರದಲ್ಲಿ ತಮಿಳುನಾಡು ಖ್ಯಾತೆ ತೆಗೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕೂಡಲೇ ಸಿನಿಮಾ ಪ್ರದರ್ಶನ ರದ್ದು ಮಾಡುವಂತೆ ಆಗ್ರಹಿಸಿದ್ದಾರೆ. ಈ ವೇಳೆ ಸಿನಿಮಾದ ಪೋಸ್ಟರ್ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನಾಕಾರರನು ಚಡುರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular