HomeKarnatakaBREAKING : ಕಾವೇರಿ ಜಲ ವಿವಾದ ತೀವ್ರ : ಆ.2ರಂದು ಸರ್ವಪಕ್ಷಗಳ ಸಭೆ ಕರೆದ ಸಿಎಂ...

BREAKING : ಕಾವೇರಿ ಜಲ ವಿವಾದ ತೀವ್ರ : ಆ.2ರಂದು ಸರ್ವಪಕ್ಷಗಳ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕಾವೇರಿ ಜಲ ವಿವಾದದ ಕುರಿತು ಮುಂದಿನ ಕಾನೂನು ಹಾಗೂ ರಾಜಕೀಯ ಹೋರಾಟದ ರೂಪುರೇಷೆಗಳನ್ನು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಗಸ್ಟ್ 2 (ಭಾನುವಾರ) ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಕಾವೇರಿ ಜಲ ವಿವಾದದ ಕುರಿತು ರಾಜ್ಯದ ಮುಂದಿನ ನಿಲುವು, ಕಾನೂನು ಹೋರಾಟ ಹಾಗೂ ರೈತರ ಹಿತಾಸಕ್ತಿಯನ್ನು ಕಾಪಾಡುವ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಗಸ್ಟ್ 2ರಂದು ವಿಧಾನಸೌಧದಲ್ಲಿ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಸಭೆಗೆ ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷಗಳ ನಾಯಕರು ಮತ್ತು ಶಾಸಕರಿಗೆ ಆಹ್ವಾನ ನೀಡಲಾಗಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಈ ಸಭೆಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ಹಾಗೂ ಜೆಡಿಎಸ್‌ನ ಶಾಸಕರು, ವಿವಿಧ ಪಕ್ಷಗಳ ಮುಖಂಡರು ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗಿದೆ. ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಏಕಮತದ ನಿರ್ಧಾರ ಕೈಗೊಳ್ಳುವ ಉದ್ದೇಶದಿಂದ ಈ ಸಭೆ ಆಯೋಜಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ವಪಕ್ಷ ಸಭೆಯಲ್ಲಿ ಕಾವೇರಿ ನೀರು ಹಂಚಿಕೆ ಕುರಿತ ಇತ್ತೀಚಿನ ಬೆಳವಣಿಗೆಗಳು, ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ಪ್ರಾಧಿಕಾರಗಳ ಮುಂದೆ ಅನುಸರಿಸಬೇಕಾದ ಕಾನೂನು ಹಾದಿ, ರೈತರ ಹಿತಾಸಕ್ತಿ ಮತ್ತು ರಾಜ್ಯದ ನೀರಿನ ಪರಿಸ್ಥಿತಿ ಕುರಿತು ಸುದೀರ್ಘ ಚರ್ಚೆ ನಡೆಯುವ ಸಾಧ್ಯತೆಯಿದೆ.ಇದರ ಜೊತೆಗೆ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರೊಂದಿಗೆ ನಡೆಯಲಿರುವ ಉನ್ನತ ಮಟ್ಟದ ಮಾತುಕತೆಯ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿಯೂ ವಿಶೇಷ ಸಿದ್ಧತೆಗಳು ನಡೆಯುತ್ತಿವೆ.ಇದರ ನಡುವೆ ತಮಿಳುನಾಡಿಗೆ ನೀರು ಬಿಡುಗಡೆ ಸಂಬಂಧ CWMA ಇಂದು ಏನು ಆದೇಶ ಹೊರಡಿಸಲಿದೆ ಎಂಬುದು ಸದ್ಯಕ್ಕಿರುವ ಕುತೂಹಲವಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular