ಉಡುಪಿ: ಕಾರ್ಕಳ ಡಿವೈಎಸ್ಪಿ ಕಚೇರಿಯಲ್ಲಿ ಲಂಚ ಸ್ವೀಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ಕಳ ಡಿವೈಎಸ್ಪಿ ಸೇರಿ ಮುವರು ಪೊಲೀಸ್ ಅಧಿಕಾರಿಗಳು ಮತ್ತು ಓರ್ವ ಸಿಬ್ಬಂದಿ ಅಮಾನತುಗೊಳಿಸಲಾಗಿದೆ.
ಕಾರ್ಕಳ ಡಿವೈಎಸ್ಪಿ ವಿಜಯ್ ಪ್ರಸಾದ್, ಪೋಲಿಸ್ ಇನ್ಸ್ಪೆಕ್ಟರ್ ಸಂದೀಪ್ ಮತ್ತು ಡಿವೈಎಸ್ಪಿ ಕಚೇರಿಯ ಸಿಬ್ಬಂದಿ ಶಿವಾನಂದ ಅಮಾನತುಗೊಂಡವರು. ಇವರ ವಿರುದ್ಧ ಇಲಾಖಾ ತನಿಖೆ ಬಾಕಿ ಇರಿಸಿ ಅಮಾನತು ಮಾಡಲಾಗಿದೆ. ತನಿಖೆ ಪೂರ್ಣಗೊಳ್ಳುವವರೆಗೆ ಅಮಾನತು ಮುಂದುವರೆಯಲಿದೆ.
ಹಣಕ್ಕೆ ಬೇಡಿಕೆ ಇಟ್ಟು ವಿಡಿಯೋಗಳು ಮತ್ತು ಆರೋಪಗಳ ಆಧಾರದ ಮೇಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್ ಅವರು ಪ್ರಾಥಮಿಕ ವಿಚಾರಣೆ ನಡೆಸಿದ್ದು, ಅದರ ಆಧಾರದ ಮೇಲೆ ಡಿವೈಎಸ್‍ಪಿ ವಿಜಯ ಪ್ರಸಾದ್, ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕ ಸಂದೀಪ್, ಮತ್ತು ಡಿವೈಎಸ್ಪಿ ಕಚೇರಿ ಸಿಬ್ಬಂದಿ ಶಿವಾನಂದ ಅವರನ್ನು ಅಮಾನತು ಮಾಡಲಾಗಿದೆ ಎಂದು ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

