ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಕಲಿ ವಿಡಿಯೋ ಹರಿಬಿಟ್ಟ ಆರೋಪದಲ್ಲಿ ಮೆಟಾ ಇಂಡಿಯಾ ಮುಖ್ಯಸ್ಥ ಅರುಣ್ ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಫೇಸ್ ಬುಕ್, ಇನ್ ಸ್ಟಾ ಗ್ರಾಂ ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ತಿರುಚಿದ ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣ ಸಂಬಂಧ ಮೆಟಾ ಮುಖ್ಯಸ್ಥ ಅರುಣ್ ಶ್ರೀನಿವಾಸ್ ಸೇರಿದಂತೆ ಹಲವರ ವಿರುದ್ಧ ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರಿಂದ ಎಫ್ ಐ ಆರ್ ದಾಖಲಾಗಿದೆ.
ಬಿಎನ್ ಎಸ್ ಹಾಗೂ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದೇ ವೇಳೆ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಆರೋಪ ಹಿನ್ನೆಲೆಯಲ್ಲಿ ಮಹಿಳೆ ವಿರುದ್ಧವೂ ಜೀರೋ ಎಫ್ ಐ ಆರ್ ದಾಖಲಾಗಿದೆ.
ನೀಟ್ ಪರೀಕ್ಷಾ ಅಕ್ರಮದ ವಿರುದ್ಧ ದೆಹಲಿಯಲ್ಲಿ ನಡೆದ ಸಿಜೆಪಿ (ಕಾಕ್ರೋಚ್ ಜನತಾ ಪಾರ್ಟಿ) ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ನಕಲಿ ವಿಡಿಯೋಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿದ್ದವು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

