ಕೊಡಗು : ಕೊಡಗು ಜಿಲ್ಲಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಾವೇರಿ ನದಿಯ ನೀರಿನ ಹರಿವು ಏರಿಕೆಯಾಗಿದೆ. ಮೂರ್ನಾಡು ಸಮೀಪದ ಬೆತ್ರಿ ಪ್ರದೇಶದಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ನದಿ ನೀರಿನ ಮಟ್ಟದಲ್ಲಿ ನಿರಂತರ ಹೆಚ್ಚಳ ಕಂಡುಬರುತ್ತಿದೆ.
ಕಳೆದ ಕೆಲ ದಿನಗಳಿಂದ ಕೊಡಗು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆ ಕಾವೇರಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಸೇರುತ್ತಿದೆ. ಬೆತ್ರಿ ಭಾಗದಲ್ಲಿ ನದಿಯ ರಭಸ ಹೆಚ್ಚಾಗಿದ್ದು, ಸ್ಥಳೀಯರಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಮಳೆ ಇದೇ ರೀತಿ ಮುಂದುವರಿದರೆ ನದಿ ಪಾತ್ರದ ಪ್ರದೇಶಗಳಲ್ಲಿ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಜಿಲ್ಲಾಡಳಿತ ಹಾಗೂ ಸ್ಥಳೀಯ ಅಧಿಕಾರಿಗಳು ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿದ್ದಾರೆ.

