HomeLatest Newsಅಂಚೆ ಇಲಾಖೆಯಲ್ಲಿ ನೇರ ಪ್ರತಿನಿಧಿಗಳ ನೇಮಕಾತಿ: ಆಗಸ್ಟ್ 13 ಮತ್ತು 14 ರಂದು ನೇರ ಸಂದರ್ಶನ

ಅಂಚೆ ಇಲಾಖೆಯಲ್ಲಿ ನೇರ ಪ್ರತಿನಿಧಿಗಳ ನೇಮಕಾತಿ: ಆಗಸ್ಟ್ 13 ಮತ್ತು 14 ರಂದು ನೇರ ಸಂದರ್ಶನ

ಶಿವಮೊಗ್ಗ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ನೇರ ಸಂದರ್ಶನವು ಆಗಸ್ಟ್ 13 ಮತ್ತು 14 ರಂದು ಬೆಳಿಗ್ಗೆ 11 ಗಂಟೆಗೆ ಅಂಚೆ ಅಧೀಕ್ಷಕರ ಕಚೇರಿ, ಕೋಟೆ ರಸ್ತೆ, ಶಿವಮೊಗ್ಗ ವಿಭಾಗ, ಶಿವಮೊಗ್ಗ-2ರಲ್ಲಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ, ಸ್ವವಿವರ ಹಾಗೂ ಶೈಕ್ಷಣಿಕ ಪ್ರಮಾಣಪತ್ರಗಳ ನಕಲುಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ಅಭ್ಯರ್ಥಿಗಳು ಕಡ್ಡಾಯವಾಗಿ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಠ ವಯೋಮಿತಿ ಇರುವುದಿಲ್ಲ. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟರು ಮತ್ತು ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ಅರ್ಹ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಸಂವಹನ ಕೌಶಲ್ಯ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಪೂರ್ವಾನುಭವ ಹೊಂದಿರುವವರಿಗೆ ವಿಶೇಷ ಆದ್ಯತೆ ಇರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಯ್ಕೆಯಾದ ಅಭ್ಯರ್ಥಿಗಳು ರೂ.5,000 ಮೌಲ್ಯದ ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿ ಇಡಬೇಕಾಗುತ್ತದೆ. ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರದ ಆಧಾರದ ಮೇಲೆ ಇಲಾಖೆಯ ನಿಯಮಾನುಸಾರ ಪ್ರೋತ್ಸಾಹಧನ ನೀಡಲಾಗುವುದು. ಟಿಎ/ಡಿಎ ಸೇರಿದಂತೆ ಇತರೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ.ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಅಂಚೆ ಜೀವ ವಿಮಾ ಅಭಿವೃದ್ಧಿ ಅಧಿಕಾರಿಗಳು, ದೂ.ಸಂ: 9036842084 ನ್ನು ಸಂಪರ್ಕಿಸಬಹುದು ಎಂದು ಅಂಚೆ ಅಧೀಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular