HomeLatest NewsBREAKING : ಕಾವೇರಿ ಕಿಚ್ಚು ; ಕರ್ನಾಟಕದಾದ್ಯಂತ 'ಜನ ನಾಯಗನ್' ಚಿತ್ರ ಪ್ರದರ್ಶನ ಸ್ಥಗಿತ

BREAKING : ಕಾವೇರಿ ಕಿಚ್ಚು ; ಕರ್ನಾಟಕದಾದ್ಯಂತ ‘ಜನ ನಾಯಗನ್’ ಚಿತ್ರ ಪ್ರದರ್ಶನ ಸ್ಥಗಿತ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿವಾದದ ಹಿನ್ನೆಲೆಯಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ನಡುವೆ, ತಮಿಳು ನಟ ಹಾಗೂ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅಭಿನಯದ ಚಿತ್ರ ‘ಜನ ನಾಯಗನ್’ (Jana Nayagan) ಪ್ರದರ್ಶನವನ್ನು ಕರ್ನಾಟಕದಾದ್ಯಂತ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನ ಸಂಪಿಗೆ ಥಿಯೇಟರ್ ಸೇರಿದಂತೆ ಕೆಲವು ಚಿತ್ರಮಂದಿರಗಳು ಇಂದಿನ ಎಲ್ಲಾ ಪ್ರದರ್ಶನಗಳನ್ನು ರದ್ದುಗೊಳಿಸಿವೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವಿಜಯ್ ಅವರ ಪೋಸ್ಟರ್ಗಳನ್ನು ತೆರವುಗೊಳಿಸಲಾಗಿದ್ದು, ಕೆಲವು ಕಡೆಗಳಲ್ಲಿ ಇತರ ಪೋಸ್ಟರ್ಗಳನ್ನು ಅಂಟಿಸಿ ಮುಚ್ಚಲಾಗಿದೆ.
ಇದೇ ವೇಳೆ, ನಗರದ ಹಲವು ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ವಿಶೇಷವಾಗಿ ತಮಿಳು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳಲ್ಲಿ ಶ್ರೀರಾಂಪುರ ಪೊಲೀಸರು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ, ನಿರಂತರ ಗಸ್ತು ನಡೆಸುತ್ತಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ತಮಿಳು ಚಿತ್ರರಂಗದ ಜನಪ್ರಿಯ ನಟ ದಳಪತಿ ವಿಜಯ್ ಅಭಿನಯದ ‘ಜನ ನಾಯಗನ್’ (Jana Nayagan) ಅವರ ಸಿನಿ ಬದುಕಿನ ಕೊನೆಯ ಚಿತ್ರವಾಗಿ ಬಿಡುಗಡೆಯಾಗಿ ಭಾರೀ ಗಮನ ಸೆಳೆದಿದೆ. ರಾಜಕೀಯ ಆಕ್ಷನ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಖ್ಯಾತ ನಿರ್ದೇಶಕ ಹೆಚ್. ವಿನೋದ್ ನಿರ್ದೇಶಿಸಿದ್ದು, 2026ರ ಜುಲೈ 23ರಂದು ವಿಶ್ವದಾದ್ಯಂತ ತೆರೆಕಂಡಿದೆ.ಚಿತ್ರದಲ್ಲಿ ದಳಪತಿ ವಿಜಯ್ ಅವರು ಕಾಣಿಸಿಕೊಂಡಿದ್ದು, ಅವರ ಅಭಿನಯಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ನಾಯಕಿಯಾಗಿ ಪೂಜಾ ಹೆಗ್ಡೆ ನಟಿಸಿದ್ದು, ಪ್ರಮುಖ ಪಾತ್ರಗಳಲ್ಲಿ ಬಾಬಿ ಡಿಯೋಲ್, ಪ್ರಕಾಶ್ ರಾಜ್ ಹಾಗೂ ಮಮಿತಾ ಬೈಜು ಅಭಿನಯಿಸಿದ್ದಾರೆ. ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ ಮಾಡಿದ್ದು, ಹಾಡುಗಳು ಹಾಗೂ ಹಿನ್ನೆಲೆ ಸಂಗೀತ ಉತ್ತಮ ಪ್ರತಿಕ್ರಿಯೆ ಪಡೆದಿವೆ. ಕೆ.ವಿ.ಎನ್. ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular