ಚೆನ್ನೈ: ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಂತೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಕರ್ನಾಟಕ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ತಮಿಳುನಾಡು ಮಾಜಿ ಸಿಎಂ ಎಡಪ್ಪಾಡಿ ಪಳನಿಸ್ವಾಮಿ, ಕರ್ನಾಟಕ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.
ಚೆನ್ನೈನಲ್ಲಿ ಮಾತನಾಡಿದ ಅವರು, ಕರ್ನಾಟಕ ಭೇಟಿಗೆ ಆಹ್ವಾನ ಎಂದರೆ ನೀರು ಬರುವುದಿಲ್ಲವೆಂದೇ ಅರ್ಥ. ಕರ್ನಾಟಕದ ಆಹ್ವಾನ, ಹೆಲಿಕಾಪ್ಟರ್ ಆಫರ್ ನಿಂದ ಯಾವುದೇ ಪ್ರಯೋಜನವಿಲ್ಲ. ಕರ್ನಾಟಕದಿಂದ ತಮಿಳುನಾಡಿಗೆ ಯಾವುದೇ ಲಾಭವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ತಮಿಳುನಾಡಿನಲ್ಲಿಯೂ ತಕ್ಷಣ ಸರ್ವಪಕ್ಷ ಸಭೆ ಕರೆಯಬೇಕು. ಡೆಲ್ಟಾ ಭಾಗದ ರೈತ ಸಂಘಟನೆಗಳು ಸಭೆಗೆ ಬರಬೇಕು. ಮೇಕೆದಾಟು, ಕಾವೇರಿ ವಿಚಾರದಲ್ಲಿ ತಮಿಳುನಾದಿನಲ್ಲಿಯೂ ಎಲ್ಲಾ ಪಕ್ಷಗಳು ಒಗ್ಗಟ್ಟು ತೋರಿಸಲಿ ತಮಿಳುನಾಡಿನ ರೈತರ ಹಿತಾಸಕ್ತಿ ಕಾಪಾಡಲು ಕ್ರಮ ಕೈಗೊಳ್ಲುವಂತೆ ಎಐಎಡಿಎಂಕೆ ಆಗ್ರಹಿಸಿದೆ.

