HomeKarnatakaವಾರದಲ್ಲಿ 2-3 ಗ್ರಾಮ ಪಂಚಾಯತಿಗೆ ಖುದ್ದು ಭೇಟಿ ನೀಡಿ, ಸಮಸ್ಯೆ ಪರಿಹರಿಸಿ: ಸಿಇಓಗಳಿಗೆ ಸಚಿವ ಈಶ್ವರ...

ವಾರದಲ್ಲಿ 2-3 ಗ್ರಾಮ ಪಂಚಾಯತಿಗೆ ಖುದ್ದು ಭೇಟಿ ನೀಡಿ, ಸಮಸ್ಯೆ ಪರಿಹರಿಸಿ: ಸಿಇಓಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಕಾರ್ಯನಿರ್ವಹಣಾಧಿಕಾರಿಗಳು ವಾರದಲ್ಲಿ ಕನಿಷ್ಠ 2-3 ಗ್ರಾಮ ಪಂಚಾಯತಿ ಕಚೇರಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿ, ಪರಿಹರಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಿಇಓಗಳೊಂದಿಗೆ ವಿಬಿಜಿ ರಾಮ್ ಜಿ ಅನುಷ್ಠಾನ ಹಾಗೂ ಗುಳೆ ತಡೆ ಕುರಿತ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ಖಂಡ್ರೆ, ನೀವು ಗ್ರಾ.ಪಂ.ಗೆ ಭೇಟಿ ನೀಡಿದರೆ ಕಾಮಗಾರಿ ಚುರುಕಾಗುತ್ತದೆ. ಇದರಿಂದ ಗ್ರಾಮೀಣ ಅಭಿವೃದ್ಧಿ ಆಗುತ್ತದೆ ಎಂದರು.

ಮಳೆಯ ಕೊರತೆ ಇರುವ ಪ್ರಸಕ್ತ ಸನ್ನಿವೇಶದಲ್ಲಿ ಎಲ್ಲ ಸಿಇಓಗಳೂ ಕ್ರಿಯಾಶೀಲರಾಗಿ, ತಾಲೂಕು ಕಾರ್ಯನಿರ್ವಹಣಾಧಿಕಾರಿ ಮತ್ತು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಪ್ರಾಮಾಣಿಕವಾಗಿ ಮತ್ತು ದಕ್ಷತೆಯಿಂದ ಕಾರ್ಯ ನಿರ್ವಹಿಸುವಂತೆ ಮಾಡಬೇಕು ಎಂದು ಸೂಚಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೇ ರೀತಿ ತಾಲೂಕು ಕಾರ್ಯ ನಿರ್ವಹಣಾಧಿಕಾರಿಗಳು ಕೂಡ ಪಿಡಿಓಗಳೊಂದಿಗೆ ಸಭೆ ನಡೆಸಿ, ವಿಬಿಜಿ ರಾಮ್ ಜಿ ಅಡಿ ಅರ್ಹರಿಗೆ ಉದ್ಯೋಗ ನೀಡಲಾಗುತ್ತಿದೆಯೇ, ವೇತನ ಸಕಾಲದಲ್ಲಿ ಪಾವತಿ ಆಗಿತ್ತಿದೆಯೇ ಇಲ್ಲವೆ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular