HomeKarnatakaBIG NEWS: ಶಾಲೆ-ಕಾಲೇಜುಗಳ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟ ನಿಷೇಧ

BIG NEWS: ಶಾಲೆ-ಕಾಲೇಜುಗಳ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟ ನಿಷೇಧ

ಬೆಂಗಳೂರು: ಮಕ್ಕಳ ಆರೋಗ್ಯ ಕಾಪಾಡುವ ಉದ್ದೇಶದಿಂದ ಶಾಲೆ, ಕಾಲೇಜುಗಳಲ್ಲಿ ಮತ್ತು ಸುತ್ತಲಿನ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟ ನಿಷೇಧಿಸಲಾಗಿದೆ. ಶಾಲೆ ಕಾಲೇಜುಗಳಲ್ಲಿ ಮತ್ತು ವ್ಯಾಪ್ತಿಯಲ್ಲಿ ಜಂಕ್ ಪುಡ್ ಗಳ ಮಾರಾಟ, ವಿತರಣೆ, ಪ್ರಚಾರವನ್ನು ಆರೋಗ್ಯ ಇಲಾಖೆ ನಿಷೇಧಿಸಿದೆ.

ಆರೋಗ್ಯ ಸಚಿವ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಮಕ್ಕಳಲ್ಲಿ ಆರೋಗ್ಯ ಕಾಪಾಡಲು ಅವರಿಗೆ ಉತ್ತಮ ಆಹಾರ ಕ್ರಮ ಬೆಳೆಸಬೇಕು. ಇದಕ್ಕಾಗಿ ಶಾಲೆ ಮತ್ತು ಕಾಲೇಜುಗಳಲ್ಲಿ ಹಾಗೂ ಸುತ್ತಲಿನ 50 ಮೀಟರ್ ವ್ಯಾಪ್ತಿಯಲ್ಲಿ ಕೊಬ್ಬು, ಸಕ್ಕರೆ, ಉಪ್ಪಿನಾಂಶ ಹೆಚ್ಚಿರುವ ಯಾವುದೇ ಆಹಾರ ಪದಾರ್ಥಗಳ ಮಾರಾಟ ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.

ಶಾಲಾ ಕಾಲೇಜುಗಳ ಕ್ಯಾಂಟೀನ್ ಗಳಲ್ಲಿಯೂ ನಿಗದಿತ ಆಹಾರ ವಿತರಿಸದಂತೆ ಸೂಚಿಸಲಾಗುವುದು. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಜುಲೈನಲ್ಲಿ ರಾಜ್ಯದ 134ಕ್ಕೂ ಹೆಚ್ಚಿನ ಶಾಲೆ, ಕಾಲೇಜುಗಳ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಿದ್ದು, ಈ ವೇಳೆ ಕ್ಯಾಂಟೀನ್ ಗಳಲ್ಲಿಯೇ ಜಂಕ್ ಫುಡ್ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಬಿಳಿ ಬ್ರೆಡ್, ಪಾಸ್ತಾ, ಸಂಸ್ಕರಿಸಿದ ಕಾರ್ಬೋಹೈಡ್ರೇಟ್ ಆಹಾರ ಪದಾರ್ಥಗಳನ್ನು ನೀಡುತ್ತಿರುವುದು ಪತ್ತೆಯಾಗಿದೆ. ಗುಣಮಟ್ಟ, ಸ್ವಚ್ಛತೆ, ನೈರ್ಮಲ್ಯ, ಲೇಬಲಿಂಗ್ ಸೇರಿ ಆರೋಗ್ಯದ ಮೇಲೆ ಪರಿಣಾಮ ಬೀರಬಹುದಾದ ಆಹಾರ ಪದಾರ್ಥಗಳು ತಪಾಸಣೆಯು ವೇಳೆ ಕಂಡು ಬಂದಿವೆ. ಸಂಶಯಾಸ್ಪದವಾಗಿ ಕಂಡುಬಂದ 53 ಆಹಾರ ಮಾದರಿ ಸಂಗ್ರಹಿಸಿ ವಿಶ್ಲೇಷಣೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಆಹಾರ ಸುರಕ್ಷತೆ ಗುಣಮಟ್ಟ ಕಾಯ್ದೆಯಡಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಗೆ ಸುರಕ್ಷಿತ ಗುಣಮಟ್ಟ, ಆರೋಗ್ಯಕರ ಆಹಾರ ಲಭ್ಯವಾಗಬೇಕೆಂಬುದು ನಮ್ಮ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular