HomeLatest Newsಚಿಕ್ಕಮಗಳೂರು ವಿಧಾನ ಪರಿಷತ್ ಮತ ಮರುಎಣಿಕೆ: ಕಾಂಗ್ರೆಸ್ ಅಭ್ಯರ್ಥಿಗೆ ಅಧಿಕೃತ ಜಯ, ಬಿಜೆಪಿಗೆ ಹಿನ್ನಡೆ

ಚಿಕ್ಕಮಗಳೂರು ವಿಧಾನ ಪರಿಷತ್ ಮತ ಮರುಎಣಿಕೆ: ಕಾಂಗ್ರೆಸ್ ಅಭ್ಯರ್ಥಿಗೆ ಅಧಿಕೃತ ಜಯ, ಬಿಜೆಪಿಗೆ ಹಿನ್ನಡೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಚಿಕ್ಕಮಗಳೂರು ವಿಧಾನ ಪರಿಷತ್ ಚುನಾವಣೆಯ ಮತ ಮರುಎಣಿಕೆಯ ಅಧಿಕೃತ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಎ.ವಿ. ಗಾಯತ್ರಿ ಶಾಂತೇಗೌಡ ಅವರು ರೋಚಕ ಗೆಲುವು ಸಾಧಿಸಿದ್ದಾರೆ.

ಸುಪ್ರೀಂ ಕೋರ್ಟ್ ಸೂಚನೆಯಂತೆ ಹೈಕೋರ್ಟ್‌ನಲ್ಲಿ ನಡೆದ ಮುಚ್ಚಿದ ಲಕೋಟೆಯ ಮತ ಮರುಎಣಿಕೆಯಲ್ಲಿ ಗಾಯತ್ರಿ ಶಾಂತೇಗೌಡ ಅವರು 9 ಮತಗಳ ಅಂತರದಿಂದ ಜಯಗಳಿಸಿರುವುದಾಗಿ ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಅವರ ಪೀಠ ಆದೇಶ ಹೊರಡಿಸಿದೆ. ಇದರೊಂದಿಗೆ ಬಿಜೆಪಿಯ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಹಾಲಿ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರಿಗೆ ಹಿನ್ನಡೆಯುಂಟಾಗಿದೆ.

ಹಿನ್ನೆಲೆ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚುನಾವಣೆಯ ಹಿನ್ನೆಲೆ

2021ರ ಡಿಸೆಂಬರ್ 10ರಂದು ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಚುನಾವಣೆ ನಡೆದಿತ್ತು.

ಅಂದು ನಡೆದ ಚುನಾವಣೆಯಲ್ಲಿ ಎಂ.ಕೆ. ಪ್ರಾಣೇಶ್ ಅವರು ಕೇವಲ 6 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು ಎಂದು ಘೋಷಿಸಲಾಗಿತ್ತು.

ಚುನಾವಣೆಯಲ್ಲಿ ಸ್ಥಳೀಯ ಪಟ್ಟಣ ಪಂಚಾಯತ್, ನಗರಸಭೆ ಹಾಗೂ ಪುರಸಭೆಗಳ 12 ಜನ ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಿದ್ದರು. ಇದನ್ನು ಪ್ರಶ್ನಿಸಿ ಎ.ವಿ. ಗಾಯತ್ರಿ ಶಾಂತೇಗೌಡ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂಬ ವಾದವನ್ನು ನ್ಯಾಯಾಲಯದಲ್ಲಿ ಮಂಡಿಸಲಾಗಿತ್ತು.

ಚುನಾವಣಾ ಆಯೋಗವು ಮುಚ್ಚಿದ ಲಕೋಟೆಯಲ್ಲಿ ಸಿದ್ಧಪಡಿಸಿದ್ದ ಮರುಮತ ಎಣಿಕೆಯ ಫಲಿತಾಂಶವನ್ನು ಹೈಕೋರ್ಟ್‌ಗೆ ಸಲ್ಲಿಸಿತ್ತು. ನ್ಯಾಯಾಲಯದ ಪರಿಶೀಲನೆಯ ಬಳಿಕ ಈಗ 9 ಮತಗಳ ಗೆಲುವು ಗಾಯತ್ರಿ ಶಾಂತೇಗೌಡರ ಪಾಲಿ2ಗೆ ಒಲಿದಿದೆ.

ಗಾಯತ್ರಿ ಶಾಂತೇಗೌಡ ಪ್ರತಿಕ್ರಿಯೆ

​”ಸತ್ಯಕ್ಕೆ ಎಂದೆಂದಿಗೂ ಜಯ ಸಿಗಲಿದೆ ಎಂಬ ನಂಬಿಕೆ ಮತ್ತೊಮ್ಮೆ ಸಾಬೀತಾಗಿದೆ. ನ್ಯಾಯಾಲಯದ ಆದೇಶದಂತೆ ನನಗೆ ಶೀಘ್ರವೇ ಪ್ರಮಾಣವಚನ ಬೋಧಿಸುವಂತೆ ಸಭಾಪತಿಗಳಿಗೆ ಕೋರ್ಟ್ ಸೂಚಿಸಿದೆ. ಇನ್ನುಳಿದಿರುವ ಒಂದೂವರೆ ವರ್ಷದ ಅವಧಿಯಲ್ಲಿ ಜನರ ಪರವಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ ಎಂದು​ ಎ.ವಿ. ಗಾಯತ್ರಿ ಶಾಂತೇಗೌಡ ಅವರು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular