HomeLatest Newsಭಾರಿ ಮಳೆ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ಸ್ನಾನ ಘಟ್ಟ ಮುಳುಗಡೆ: ಭಕ್ತರು ನದಿಯತ್ತ ತೆರಳದಂತೆ ದೇವಸ್ಥಾನದ...

ಭಾರಿ ಮಳೆ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ಸ್ನಾನ ಘಟ್ಟ ಮುಳುಗಡೆ: ಭಕ್ತರು ನದಿಯತ್ತ ತೆರಳದಂತೆ ದೇವಸ್ಥಾನದ ಆಡಳಿತ ಮಂಡಳಿ ಸೂಚನೆ

ಕುಕ್ಕೆ: ಎಡೆಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಪವಿತ್ರ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದೆ.

ಸ್ನಾನಘಟ್ಟ ಮುಳುಗಡೆಯಾಗಿರುವುದರಿಂದ ಸುರಕ್ಷತಾ ದೃಷ್ಟಿಯಿಂದ ಭಕ್ತರು ನದಿಯತ್ತ ತೆರಳದಂತೆ ದೇವಸ್ಥಾನ ಆಡಳಿತ ಹಾಗೂ ಸ್ಥಳೀಯ ಆಡಳಿತ ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ನಾನಘಟ್ಟ ಬಳಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಪರ್ಯಾಯ ವ್ಯವಸ್ಥೆಯಾಗಿ ದೊಡ್ಡ ಡ್ರಮ್‌ಗಳಲ್ಲಿ ನೀರು ತುಂಬಿಸಿ ಸ್ನಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ನಿತ್ಯ ಸಾವಿರಾರು ಭಕ್ತರು ಯಾವುದೇ ತೊಂದರೆಯಾಗದಂತೆ ದೇವರ ದರ್ಶನ ಪಡೆಯುತ್ತಿದ್ದಾರೆ.

ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಪೊಲೀಸರು ಹಾಗೂ ಸಿಬ್ಬಂದಿಯನ್ನು ನಿಯೋಜಿಸಿ, ಭಕ್ತರು ನದಿಗೆ ಇಳಿಯದಂತೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ. ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಕುಮಾರಧಾರಾ ನದಿಯ ನೀರಿನ ಮಟ್ಟದ ಮೇಲೆ ಆಡಳಿತ ನಿರಂತರ ನಿಗಾ ಇರಿಸಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಪರ್ಯಾಯ ಸ್ನಾನ ವ್ಯವಸ್ಥೆ ಮುಂದುವರಿಯಲಿದೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ನದಿಗಳು, ಹೊಳೆಗಳು ತುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಕೆಲವೆಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಉರುಳಿರುವ ಘಟನೆಗಳು ವರದಿಯಾಗಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular