HomeIndiaಅತ್ಯಾಧುನಿಕ ಗ್ರೀನ್ ಫೀಲ್ಡ್ ಅಲ್ಲೂರಿ ಸೀತಾರಾಮರಾಜು ಏರ್ ಪೋರ್ಟ್ ಉದ್ಘಾಟಿಸಿದ ಪ್ರಧಾನಿ ಮೋದಿ: ಏನಿದರ ವಿಶೇಷತೆ?

ಅತ್ಯಾಧುನಿಕ ಗ್ರೀನ್ ಫೀಲ್ಡ್ ಅಲ್ಲೂರಿ ಸೀತಾರಾಮರಾಜು ಏರ್ ಪೋರ್ಟ್ ಉದ್ಘಾಟಿಸಿದ ಪ್ರಧಾನಿ ಮೋದಿ: ಏನಿದರ ವಿಶೇಷತೆ?

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿಯವರು ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಭೋಗಾಪುರಂನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅತ್ಯಾಧುನಿಕ ಗ್ರೀನ್ ಫೀಲ್ಡ್ ಅಲ್ಲುರಿ ಸೀತಾರಾಮ ರಾಜು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದಾರೆ.

ಈ ವೇಳೆ ಆಂಧ್ರಪ್ರದೇಶದ ರಾಜ್ಯಪಾಲರಾದ ಎಸ್. ಅಬ್ದುಲ್ ನಜೀರ್, ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಉಪಮುಖ್ಯಮಂತ್ರಿ ಕೆ. ಪವನ್ ಕಲ್ಯಾಣ್ ಹಾಗೂ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಮಾನ ನಿಲ್ದಾಣ ನಿರ್ಮಿಸಿರುವ ‘ಜಿಎಂಆರ್ ಗ್ರೂಪ್’ ಪ್ರತಿನಿಧಿಗಳು ಪ್ರಧಾನಮಂತ್ರಿಗಳಿಗೆ ವಿಮಾನ ನಿಲ್ದಾಣದ ಅತ್ಯಾಧುನಿಕ ಸೌಲಭ್ಯಗಳು ಮತ್ತು ತಂತ್ರಜ್ಞಾನದ ಕುರಿತು ಮಾಹಿತಿ ನೀಡಿದರು.

ಏರ್ ಪೋರ್ಟ್ ವಿಶೇಷತೆ:

ಸಾರ್ವಜನಿಕ-ಖಾಸಗಿ ಸಹಭಾಗಿತ್ವದ (PPP) ಅಡಿಯಲ್ಲಿ ₹5,640 ಕೋಟಿಗೂ ಅಧಿಕ ವೆಚ್ಚದಲ್ಲಿ ಈ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗಿದೆ. ಈ ವಿಮಾನ ನಿಲ್ದಾಣವು ವಾರ್ಷಿಕವಾಗಿ 60 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ.

ಕೃತಕ ಬುದ್ಧಿಮತ್ತೆ (AI), ಬಿಲ್ಡಿಂಗ್ ಇನ್ಫರ್ಮೇಷನ್ ಮಾಡೆಲಿಂಗ್ (BIM), ಬಯೋಮೆಟ್ರಿಕ್ ಪ್ರಯಾಣಿಕರ ಪ್ರೊಸೆಸಿಂಗ್ ಮತ್ತು ಸ್ವಯಂಚಾಲಿತ ಬ್ಯಾಗೇಜ್ ಹ್ಯಾಂಡ್ಲಿಂಗ್ ಸಿಸ್ಟಮ್‌ಗಳನ್ನು ಒಳಗೊಂಡಿದೆ. 5 ಮೆಗಾವ್ಯಾಟ್ ಸಾಮರ್ಥ್ಯದ ಸೋಲಾರ್ ಪವರ್ ಪ್ಲಾಂಟ್, ಮಳೆನೀರು ಕೊಯ್ಲು ಮತ್ತು ಇವಿ (EV) ಚಾರ್ಜಿಂಗ್ ಮೂಲಸೌಕರ್ಯಗಳನ್ನು ಹೊಂದಿದ್ದು, US Green Building Council (USGBC) ನ ನೋಂದಣಿ ಪಡೆದಿದೆ.

ವಿಮಾನ ನಿಲ್ದಾಣದ ಮೇಲ್ಛಾವಣಿಯು ಆಂಧ್ರಪ್ರದೇಶದ ಅರಾಕು ಕಣಿವೆಯ ಸಾಂಪ್ರದಾಯಿಕ ‘ಚುಟ್ಟಿಲು’ ಗುಡಿಸಲುಗಳು ಮತ್ತು ಹಾರುವ ಮೀನಿನ (flying fish) ಆಕಾರದಿಂದ ಪ್ರೇರಿತವಾಗಿದೆ.

ಇದೇ ವೇಳೆ ಪ್ರಧಾನಿ ಮೋದಿಯವರು ವಿಶಾಖಪಟ್ಟಣದಲ್ಲಿ ₹460 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಾಣವಾಗಲಿರುವ ASIP ಸೆಮಿಕಂಡಕ್ಟರ್ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದಾರೆ. ‘ಇಂಡಿಯಾ ಸೆಮಿಕಂಡಕ್ಟರ್ ಮಿಷನ್’ ಅಡಿಯಲ್ಲಿ ಅನುಮೋದನೆ ಪಡೆದ ಆಂಧ್ರಪ್ರದೇಶದ ಮೊದಲ ಸೆಮಿಕಂಡಕ್ಟರ್ ಘಟಕ ಇದಾಗಿದ್ದು, ವಾರ್ಷಿಕ 9.6 ಕೋಟಿ ಚಿಪ್‌ಗಳನ್ನು ತಯಾರಿಸುವ ಗುರಿ ಹೊಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular