HomeLatest News74,000ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಕಟ್ಟುನಿಟ್ಟಿನ ಕ್ರಮ: ಮುಂದಿನ ಆರು ತಿಂಗಳಲ್ಲಿ 36,773...

74,000ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಕಟ್ಟುನಿಟ್ಟಿನ ಕ್ರಮ: ಮುಂದಿನ ಆರು ತಿಂಗಳಲ್ಲಿ 36,773 ಹುದ್ದೆಗಳಿಗೆ ಪರೀಕ್ಷೆ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಕರ್ನಾಟಕದಲ್ಲಿ 74,000ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಮುಂದಿನ ಆರು ತಿಂಗಳಲ್ಲಿ 36,773 ಹುದ್ದೆಗಳಿಗೆ ಪರೀಕ್ಷೆ ನಡೆಸುವ ಗುರಿ ಹೊಂದಲಾಗಿದ್ದು, ಇದಕ್ಕೆ ಸುಮಾರು 3.5 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತೀಚೆಗೆ ನಡೆದ ನೀಟ್ ಮತ್ತು ಸಿಬಿಎಸ್‌ಇ ಪರೀಕ್ಷೆಗಳಲ್ಲಿ ಎದುರಾದ ಸಮಸ್ಯೆಗಳನ್ನು ತಪ್ಪಿಸಲು, ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಸೂಚನೆಯಂತೆ ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಕೆಇಎ ಮುಖಾಂತರ ರಾಂಡಮ್ ಪ್ರಶ್ನೆ ಬ್ಯಾಂಕ್ ಸಿದ್ಧಪಡಿಸಲಾಗಿದೆ. ಇದು ಪ್ರತಿ ಪ್ರಶ್ನೆಗೆ 10 ವಿವಿಧ ಆವೃತ್ತಿಗಳನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದರು.

ಇದರ ಜೊತೆಗೆ, ಬಹು-ಲೇಯರ್ ಟ್ಯಾಂಪರ್-ಪ್ರೂಫ್ ಸೆಕ್ಯೂರಿಟಿ ಪ್ಯಾಕೇಜಿಂಗ್ ಮತ್ತು ಒಂದು ಬಾರಿ ಲಾಕ್ ಮಾಡಬಹುದಾದ ಭದ್ರತಾ ಟ್ರಂಕ್‌ಗಳನ್ನು ಬಳಸಲಾಗುವುದು. ಅಕ್ರಮ ಚಟುವಟಿಕೆಗಳನ್ನು ತಡೆಯಲು ಪರೀಕ್ಷಾ ಕೊಠಡಿಗಳಲ್ಲಿ ಜಾಮರ್‌ಗಳನ್ನು ಅಳವಡಿಸಲಾಗುತ್ತಿದೆ. ಈ ಮೂಲಕ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ವಿವರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular