ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗುವ ಎಪಿಎಲ್ ಕಾರ್ಡ್ ದಾರರಿಗೂ ರಕ್ತವನ್ನು ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ.
ಆರೋಗ್ಯ ಸಚಿವ ಯು.ಟಿ. ಖಾದರ್ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಸ್ತುತ ಬಿಪಿಎಲ್ ಕಾಡ್ಡ್ ದಾರರಿಗೆ ಮಾತ್ರ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ರಕ್ತ ನೀಡಲಾಗುತ್ತಿದೆ. ಎಪಿಎಲ್ ಕಾರ್ಡ್ ಹೊಂದಿದವರಿಗೆ ಪ್ರಸ್ತುತ ಒಂದು ಪ್ಯಾಕೆಟ್ ಗೆ 1110 ರೂ. ನಂತೆ ರಕ್ತ ಒದಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಎಪಿಎಲ್ ಕಾರ್ಡ್ ದಾರರು ಕೂಡ ಆರ್ಥಿಕವಾಗಿ ಹಿಂದುಳಿದವರಾಗಿರುತ್ತಾರೆ. ಹೀಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಎಲ್ಲರಿಗೂ ಉಚಿತವಾಗಿ ರಕ್ತ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಚಿಕಿತ್ಸೆಗೆ ದಾಖಲಾದವರಿಗೆ ಇಷ್ಟೇ ರಕ್ತ ಉಚಿತ ಎಂದು ನಿರ್ಬಂಧ ವಿಧಿಸಲು ಸಾಧ್ಯವಿಲ್ಲ. ವೈದ್ಯರು ರೋಗಿಗೆ ಎಷ್ಟು ಅಗತ್ಯವಿದೆ ಎಂದು ಹೇಳುತ್ತಾರೋ ಅಷ್ಟು ರಕ್ತವನ್ನು ಉಚಿತವಾಗಿ ನೀಡಲಾಗುವುದು ಎಂದು ಸಚಿವ ಖಾದರ್ ತಿಳಿಸಿದ್ದಾರೆ.

