HomeKarnatakaಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ: ಭಾಗಮಂಡಲ ಸ್ನಾನ ಘಟ್ಟ, ತ್ರಿವೇಣಿ ಸಂಗಮ ಮುಳುಗಡೆ

ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ: ಭಾಗಮಂಡಲ ಸ್ನಾನ ಘಟ್ಟ, ತ್ರಿವೇಣಿ ಸಂಗಮ ಮುಳುಗಡೆ

ಮಡಿಕೇರಿ: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಿಂದಾಗಿ ಸಾಲು ಸಾಲು ಅನಾಹುತಗಳು ಸಂಭವಿಸುತ್ತಿವೆ. ಈ ನಡುವೆ ಕೊಡಗು ಜಿಲ್ಲೆಯಾಧ್ಯಂತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಮಡಿಕೇರಿ ತಾಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಭಾಗಮಂಡಲ ಗ್ರಾಮ ಕೇಂದ್ರ ಸಂಪೂರ್ಣವಾಗಿ ಜಲಾವೃತವಾಗಿದೆ. ರಸ್ತೆ ಸಂಚಾರ ಬಂದ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತ್ರಿವೇಣಿ ಸಂಗಮವು ಸಂಪೂರ್ಣವಾಗಿ ನೀರಿನಿಂದ ಆವೃತಗೊಂಡಿದ್ದು, ಸಂಗಮದ ಪಕ್ಕದಲ್ಲಿರುವ ಸ್ನಾನಘಟ್ಟಗಳು ಹಾಗೂ ಉದ್ಯಾನವನಗಳು ಸಹ ಮುಳುಗಡೆಯಾಗಿವೆ. ಮಳೆಯ ತೀವ್ರತೆಗೆ ಭಾಗಮಂಡಲ-ತಲಕಾವೇರಿ ಮಾರ್ಗದ ರಸ್ತೆಯು ಸಹ ನೀರಿನಿಂದ ಆವರಿಸಿದೆ. ಈ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಸ್ಥಳೀಯರು ಮತ್ತು ಪ್ರವಾಸಿಗರು ಫ್ಲೈ ಓವರ್ ಮೂಲಕ ಓಡಾಡುತ್ತಿದ್ದಾರೆ.

ಇಂದು ಕೂಡ ಜಿಲ್ಲೆಯಾದ್ಯಂತ ಮಳೆಯಾಗಲಿದ್ದು, ಪ್ರವಾಸಿಗರು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕಾವೇರಿ ಹಾಗೂ ಹಟ್ಟಿಹೊಳೆ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮ ಹಾಗೂ ಸ್ನಾನಘಟ್ಟ ಜಲಾವೃತಗೊಂಡಿವೆ. ಇದೇ ವೇಳೆ ಹಾರಂಗಿ ಜಲಾಶಯಕ್ಕೂ ಒಳಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular